Sunday, July 3, 2022

Latest Posts

ಶಿವಮೊಗ್ಗ ಮನಪಾ ವ್ಯಾಪ್ತಿಯಲ್ಲಿ 8,600 ಗಿಡ ನೆಡುವ ಕಾಮಗಾರಿ ಶೀಘ್ರ ಆರಂಭ: ಸಚಿವ ಈಶ್ವರಪ್ಪ

ಹೊಸ ದಿಗಂತ ವರದಿ, ಶಿವಮೊಗ್ಗ:

ಪರಿಸರ ಸ್ನೇಹಿ ಹಸಿರು ಶಿವಮೊಗ್ಗ ನಿರ್ಮಿಸಲು ಅಗತ್ಯವಿರುವ ಎಲ್ಲಾ ಕ್ರಮಗಳನ್ನು ಕೈಗೊಳ್ಳುವುದಾಗಿ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ತಿಳಿಸಿದರು.
ನಗರದ ಹೊರವಲಯದಲ್ಲಿರುವ ಈಶ್ವರ ವನಕ್ಕೆ ಭೇಟಿ ನೀಡಿದ ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿ, ಶಿವಮೊಗ್ಗ ಮಹಾನಗರಪಾಲಿಕೆ ವ್ಯಾಪ್ತಿಯ 7-8 ಸ್ಥಳಗಳಲ್ಲಿ 8,600 ಗಿಡಗಳನ್ನು ನೆಡಲು ಟೆಂಡರ್ ಪ್ರಕ್ರಿಯೆ ಪ್ರಗತಿಯಲ್ಲಿದೆ. ಕೆಲವೇ ದಿನಗಳಲ್ಲಿ ಕಾಮಗಾರಿ ಆರಂಭಗೊಳ್ಳಲಿದೆ ಎಂದರು.
13 ಕಿಮೀ ಕರ್ನಾಟಕ ನೀರಾವರಿ ನಿಗಮದ ವ್ಯಾಪ್ತಿಗೊಳಪಡುವ ತುಂಗಾ ಚಾನಲ್‌ನ 13 ಕಿಮೀ ಪ್ರದೇಶದಲ್ಲಿ ಚಾನಲ್‌ನ ಇಕ್ಕೆಲಗಳಲ್ಲಿ ಗಿಡಗಳನ್ನು ನೆಟ್ಟು ಹಸಿರು ಪರಿಸರ ನಿರ್ಮಾಣ, ಭೂ ಒತ್ತುವರಿ ನಿಯಂತ್ರಣ, ಪ್ರದೇಶ ವ್ಯರ್ಥವಾಗದೇ ಸದ್ಭಳಕೆಯಾಗುವಂತೆ ನೋಡಿಕೊಳ್ಳಲಾಗುವುದು. ಈ ಸಂಬಂಧ ಉನ್ನತ ಮಟ್ಟದ ಅಧಿಕಾರಿಗಳು ಹಾಗೂ ನಗರಾಭಿವೃದ್ಧಿ ಸಚಿವರೊಂದಿಗೆ ಸಮಾಲೋಚನೆ ನಡೆಸಿರುವುದಾಗಿ ತಿಳಿಸಿದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss