ಹೊಸದಿಗಂತ ವರದಿ,ಶಿವಮೊಗ್ಗ:
ನಗರದ ರೈಲ್ವೆ ನಿಲ್ದಾಣದ ಮುಂಭಾಗ ನಿರ್ಮಿಸಲಾಗುತ್ತಿರುವ ರಿಂಗ್ ರಸ್ತೆ ಕಾಮಗಾರಿಯನ್ನು ಭಾನುವಾರ ಸಂಸದ ಬಿ.ವೈ.ರಾಘವೇಂದ್ರ ಪರಿಶೀಲನೆ ನಡೆಸಿದರು.
ರಿಂಗ್ ರಸ್ತೆ ನಿರ್ಮಾಣಕ್ಕೆ ಇದ್ದ ಅಡೆತಡೆಗಳನ್ನು ಕೆಲ ತಿಂಗಳ ಹಿಂದೆ ನಿವಾರಿಸಲಾಗಿತ್ತು. ಬಳಿಕ ಕಾಮಗಾರಿ ಆರಂಭಿಸಲಾಗಿದೆ. ಇದರ ಪರಿಶೀಲನೆ ನಡೆಸಿದ ರಾಘವೇಂದ್ರ, ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕು.
ನಿಗದಿತ ಸಮಯದ ಒಳಗೆ ಪೂರ್ಣಗೊಳಿಸಲು ಆದ್ಯತೆ ನೀಡಬೇಕು ಎಂದು ಸೂಚನೆ ನೀಡಿದರು.
ಈ ವೇಳೆ ಸೂಡಾ ಅಧ್ಯಕ್ಷ ಎಸ್.ಎಸ್.ಜ್ಯೋತಿಪ್ರಕಾಶ್, ಲೋಕೋಪಯೋಗಿ ಇಲಾಖೆ ಎಇಇ ಕಿರಣ್, ಜೆಇ ಕೃಷ್ಣರೆಡ್ಡಿ ಇನ್ನಿತರರು ಇದ್ದರು.