Tuesday, August 9, 2022

Latest Posts

ಶಿವಮೊಗ್ಗ| ವಿಧಾನ ಪರಿಷತ್ತಿನ 9 ಸ್ಥಾನಗಳ ಚುನಾವಣೆಗೆ ಪಕ್ಷದ ಕಾರ್ಯಕರ್ತರನ್ನು ಪರಿಗಣಿಸಲಾಗುತ್ತದೆ: ಸಚಿವ ಕೆ.ಎಸ್.ಈಶ್ವರಪ್ಪ

ಶಿವಮೊಗ್ಗ: ವಿಧಾನ ಪರಿಷತ್ತಿನ 9 ಸ್ಥಾನಗಳಿಗೆ ನಡೆಯುವ ಚುನಾವಣೆಗೆ ಪಕ್ಷದ ಕಾರ್ಯಕರ್ತರು ಹಾಗೂ ಸರ್ಕಾರ ರಚನೆಯಲ್ಲಿ ಪ್ರಮುಖ ಪಾತ್ರ ವಹಿಸಿದವರನ್ನು ಕೂಡ ಪರಿಗಣಿಸಲಾಗುತ್ತದೆ ಎಂದು ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದರು.

ಶನಿವಾರ ವೀರಣ್ಣನ ಬೆನವಳ್ಳಿಯಲ್ಲಿ ವನಮಹೋತ್ಸವಕ್ಕೆ ಚಾಲನೆ ನೀಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ, ಈ ಹಿಂದೆ ಇದ್ದ ಸರ್ಕಾರ ವನ್ನು ಉರುಳಿಸಿ ಬಿಜೆಪಿ ಸರ್ಕಾರ ಬರಲು ಕಾಂಗ್ರೆಸ್, ಜೆಡಿಎಸ್ ನಿಂದ ಬಂದವರು ಕಾರಣರಾಗಿದ್ದಾರೆ. ಅವರೊಂದಿಗೆ ಪಕ್ಷದ ನಿಷ್ಟಾವಂತ ಕಾರ್ಯಕರ್ತರು ಇದ್ದಾರೆ ಎಂದರು.

ಬರುವ ಸೋಮವಾರ ಬೆಂಗಳೂರಿನಲ್ಲಿ ಕೋರ್ ಕಮಿಟಿ ಸಭೆ ನಡೆದು ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ. ಈ ಪಟ್ಟಿಯನ್ನು ಕೇಂದ್ರ ಸಮಿತಿಗೆ ಕಳಿಸಲಾಗುತ್ತದೆ. ಮುಂದಿನ ತೀರ್ಮಾನ ಕೇಂದ್ರ ಸಮಿತಿಗೆ ಬಿಟ್ಟಿದ್ದು ಎಂದರು.

ಹಳಬರು ಹೊಸಬರು ಎಂಬ ಭೇದ ಭಾವ ಇಲ್ಲ. ಪಕ್ಷ ಅಧಿಕಾರಕ್ಕೆ ಬರಲು ಶ್ರಮಿಸಿದವರ ಋಣ ತೀರಿಸಬೇಕಿದೆ. ಹೀಗಾಗಿ ಪಕ್ಷದ ವರಿಷ್ಠರು ನಿರ್ಧಾರ ಕೈಗೊಳ್ಳಲಿದ್ದಾರೆ ಎಂದು ಹೇಳಿದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss