ಶಿವಮೊಗ್ಗ: ಸೊರಬ ಕ್ಷೇತ್ರದಲ್ಲಿ ಆಡಳಿತ ಯಂತ್ರ ಕುಸಿದಿದೆ. ಸ್ಥಳೀಯ ಶಾಸಕ ಕುಮಾರ್ ಬಂಗಾರಪ್ಪ ಕಾರ್ಯವೈಖರಿಗೆ ಜನತೆ ಬೇಸತ್ತು ಹೋಗಿದ್ದಾರೆ ಎಂದು ಆನವಟ್ಟಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರುದ್ರಗೌಡ ಸಿ. ಪಾಟೀಲ್ ದೂರಿದರು.
ಪಟ್ಟಣದ ಕಾಂಗ್ರೆಸ್ ಕಾರ್ಯಾಲಯದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಎರಡು ಬಾರಿ ಸಚಿವರಾಗಿ ಕಾರ್ಯನಿರ್ವಹಿಸಿದ ಶಾಸಕರ ಕಾರ್ಯವೈಖರಿ ತೃಪ್ತಿ ತರುತ್ತಿಲ್ಲ. ಜನತೆ ಸ್ಪಂದಿಸುವಲ್ಲಿಯೂ ವಿಫಲರಾಗಿದ್ದಾರೆ.ಜೊತೆಗೆ ಕೊರೋನಾ ವಿರುದ್ಧ ಜಾಗೃತಿ ಮೂಡಿಸುವಲ್ಲಿಯೂ ನಿರ್ಲಕ್ಷ್ಯ ಧೋರಣೆ ಅನುಭವಿಸುತ್ತಿದ್ದಾರೆ ಎಂದು ಆರೋಪಿಸಿದರು. ತಾಲ್ಲೂಕಿನಲ್ಲಿ ಸಮರ್ಪಕವಾಗಿ ಕಾರ್ಯನಿರ್ವಹಿಸುತ್ತಿರುವ ಕೊರೋನಾ ಯೋಧರಿಗೂ ಅನಗತ್ಯವಾಗಿ ಅಡ್ಡಿಯುಂಟು ಮಾಡಲಾಗುತ್ತಿದೆ ಎಂಬ ಆರೋಪಗಳು ಕೇಳಿಬರುತ್ತಿದೆ.
ಮುಖ್ಯಮಂತ್ರಿಗಳು ಎಲ್ಲಾ ಪಕ್ಷದ ಶಾಸಕರಿಗೂ ಕೊರೋನಾ ವಿರುದ್ಧದ ಕಾರ್ಯಾಚರಣೆಯಲ್ಲಿ ಕ್ಷೇತ್ರದಲ್ಲಿಯೇ ಇದ್ದು, ಸಮರ್ಪಕವಾಗಿ ನಿಭಾಯಿಸಲು ಸೂಚಿಸಬೇಕು ಎಂದು ಆಗ್ರಹಿಸಿದರು.
ಸುದ್ದಿಗೋಷ್ಠಿಯಲ್ಲಿ ಕಾಂಗ್ರೆಸ್ ಕಾರ್ಯದರ್ಶಿ ಹಬೀಬುಲ್ಲಾ ಹವಾಲ್ದಾರ್, ಟೌನ್ ಅಧ್ಯಕ್ಷ ರಶೀದ್ ಹಿರೇಕೌಂಶಿ, ಪಪಂ ಸದಸ್ಯರಾದ ಶ್ರೀರಂಜನಿ ಪ್ರವೀಣ ಕುಮಾರ್, ಸುಲ್ತಾನ ಬೇಗಂ, ಆಫ್ರೀನ್ ಮೆಹಬೂಬ್ ಬಾಷಾ, ಪ್ರಮುಖರಾದ ಮೆಹಬೂಬ್ ಬಾಷಾ, ಸಿರಾಜುದ್ಧೀನ್, ಶಿವಪ್ಪ ಮಲ್ಲಾಪುರ, ಇತರರಿದ್ದರು.