ಶಿವಮೊಗ್ಗ: ಜಿಲ್ಲೆಯ ಸಾಗರ ಗ್ರಾಮಾಂತರ ಠಾಣೆಯ ಸರ್ಕಲ್ ಇನ್ಸ್ ಪೆಕ್ಟರ್ ಸುನೀಲ್ ಕುಮಾರ್ ಅವರಿಗೆ ಭಾನುವಾರ ಬೆಳಿಗ್ಗೆ ಹೃದಯಾಘಾತ ಸಂಭವಿಸಿದೆ. ಅವರನ್ನು ಶಿವಮೊಗ್ಗ ಆಸ್ಪತ್ರೆಗೆ ದಾಖಲಿಸಲಾಗಿದೆ.
ಶನಿವಾರ ತಡರಾತ್ರಿ ಶರಾವತಿ ಹಿನ್ನೀರಿನ ಬ್ಯಾಕೋಡು ಗ್ರಾಮದಲ್ಲಿ ನಡೆದಿದ್ದ ದಂಪತಿಗಳ ಕೊಲೆ ತನಿಖೆಗೆ ತೆರಳಿ ಶವಗಳನ್ನು ಶವಾಗಾರಕ್ಕೆ ಸಾಗಿಸಿದ ನಂತರ ಸುನೀಲ್ ಕುಮಾರ್ ಇಂದು ಬೆಳಗ್ಗೆ ಆರು ಗಂಟೆಗೆ ಮನೆಗೆ ಬಂದಿದ್ದರು.
ಮನೆಗೆ ಬಂದ ಕೆಲ ಹೊತ್ತಿನಲ್ಲೇ ಸುನೀಲ್ ಕುಮಾರ್ ಅವರಿಗೆ ಹೃದಯಾಘಾತವಾಗಿದೆ. ಕೂಡಲೇ ಅವರನ್ನು ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಸುದ್ದಿ ತಿಳಿದ ಜಿಲ್ಲಾ ರಕ್ಷಣಾಧಿಕಾರಿ ಶಾಂತಕುಮಾರ್ ಆಸ್ಪತ್ರೆಗೆ ಭೇಟಿ ನೀಡಿದ್ದರು. ಈಗ ಸುನೀಲ್ ಕುಮಾರ್ ಚೇತರಿಸಿಕೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ.