ಶಿವಮೊಗ್ಗ: ಪ್ರಧಾನಿ ನರೇಂದ್ರ ಮೋದಿ ಅವರ ಬಗ್ಗೆ ಸಾಮಾಜಿಕ ಜಾಲ ತಾಣದಲ್ಲಿ ಅವಹೇಳನ ಮಾಡಿರುವ ಆರೋಪೆೆಎದುರಿಸುತ್ತಿದ್ದ ಜಿಲ್ಲಾ ಕಾಂಗ್ರೆಸ್ ಮುಖಂಡ ದೀಪಕ್ ಸಿಂಗ್ ಅವರನ್ನು ಶನಿವಾರ ವಿನೋಬನಗರ ಪೊಲೀಸರು ಬಂಧಿಸಿ ಕರೆತಂದಿದ್ದಾರೆ.
ಇತ್ತೀಚೆಗೆ ಪ್ರಧಾನಿ ಮೋದಿ ಅವರು ನವಿಲುಗಳ ಜೊತೆ ಇರುವ ವಿಡಿಯೋ ಹಂಚಿಕೊಂಡಿದ್ದರು. ಇದರ ಕುರಿತು ಫೇಸ್ ಬುಕ್ ನಲ್ಲಿ ದೀಪಕ್ ಸಿಂಗ್ ಅವಹೇಳನಕಾರಿಯಾಗಿ ಬರೆದಿದ್ದರು ಎನ್ನಲಾಗಿದೆ. ಈ ಕುರಿತು ಬಿಜೆಪಿ ಯುವ ಮೋರ್ಚಾ ವತಿಯಿಂದ ಶುಕ್ರವಾರ ಜಿಲ್ಲಾ ರಕ್ಷಣಾಧಿಕಾರಿಗಳಿಗೆ ದೂರು ಸಲ್ಲಿಸಲಾಗಿತ್ತು.
ಪ್ರಕರಣವನ್ನು ವಿನೋಬನಗರ ಪೊಲೀಸರು ದಾಖಲಿಸಿಕೊಂಡಿದ್ದರು. ಇದೀಗ ಆರೋಪಿಯನ್ನು ಬಂಧಿಸಿದ್ದಾರೆ.