Sunday, March 7, 2021

Latest Posts

ಶಿವಮೊಗ್ಗ ಸ್ಫೋಟ ಪ್ರಕರಣ: ಉನ್ನತ ಮಟ್ಟದ ತನಿಖೆಗೆ ಸಿಎಂ ಯಡಿಯೂರಪ್ಪ ಆದೇಶ

ಹೊಸದಿಗಂತ ಆನ್‌ಲೈನ್ ಡೆಸ್ಕ್:

ಶಿವಮೊಗ್ಗದ ಅಬ್ಬಲಗೆರೆ-ಹುಣಸೋಡು ಮಧ್ಯೆ ಇರುವ ಜಲ್ಲಿ ಕ್ರಶರ್ ಬಳಿ ಕಲ್ಲು ಗಣಿಗಾರಿಕೆ ಪ್ರದೇಶದಲ್ಲಿ ಸಂಭವಿಸಿದ ಭಾರೀ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಉನ್ನತ ಮಟ್ಟದ ತನಿಖೆ ನಡೆಸಲು ಸಿಎಂ ಯಡಿಯೂರಪ್ಪ ಆದೇಶಿಸಿದ್ದಾರೆ.
ಈ ಬಗ್ಗೆ ಸಿಎಂ ಟ್ವೀಟ್ ಮಾಡಿದ್ದು, ಶಿವಮೊಗ್ಗದ ಹುಣಸೋಡು ಬಳಿ ನಿನ್ನೆ ರಾತ್ರಿ ಸಂಭವಿಸಿದ ಭಾರೀ ಸ್ಪೋಟದಲ್ಲಿ ಅನೇಕ ಮಂದಿ ಸಾವನ್ನಪ್ಪಿರುವ ಸುದ್ದಿ ತೀವ್ರ ಆಘಾತಕಾರಿ. ನಿನ್ನೆ ತಡರಾತ್ರಿಯಿಂದಲೇ ಸಂಪರ್ಕದಲ್ಲಿದ್ದು, ಅಗತ್ಯ ರಕ್ಷಣಾ ಕಾರ್ಯಾಚರಣೆಗೆ ತಂಡಗಳನ್ನು ಈಗಾಗಲೇ ರವಾನಿಸಲಾಗಿದೆ.
ಮೃತರ ಆತ್ಮಕ್ಕೆ ಚಿರಶಾಂತಿ ಕೋರುತ್ತಾ, ಅವರ ಕುಟುಂಬದವರಿಗ ತೀವ್ರ ಸಂತಾಪಗಳನ್ನು ವ್ಯಕ್ತಪಡಿಸುತ್ತೇನೆ. ಗಾಯಗೊಂಡವರಿಗೆ ಚಿಕಿತ್ಸೆ ನೀಡಲಾಗುತ್ತಿದ್ದು, ಅವರೆಲ್ಲರೂ ಶೀಘ್ರ ಚೇರಿಸಿಕೊಳ್ಳಲಿ ಎಂದು ಹಾರೈಸುತ್ತೇನೆ. ಈ ದುರ್ಘಟನೆಯ ಉನ್ನತ ಮಟ್ಟದ ತನಿಖೆಗೆ ಆದೇಶಿಸಲಾಗಿದ್ದು, ತಪ್ಪಿತಸ್ಥರ ವಿರುದ್ಧ ಕ್ರಮ ನಿಶ್ಚಿತ ಎಂದಿದ್ದಾರೆ.

 

ಸುದ್ದಿ ಇಷ್ಟವಾಯ್ತಾ, ಇತರರಿಗೂ ಶೇರ್ ಮಾಡಿ, ಓದಿಸಿ.

Whatsapp Group
Telegram

Latest Posts

Don't Miss