Tuesday, August 16, 2022

Latest Posts

ಶಿವಮೊಗ್ಗ| 4 ಲಕ್ಷ ಜನರಿಗೆ ಆಯುರ್ವೇದಿಕ್ ಕಿಟ್ ವಿತರಣೆಗೆ ಚಾಲನೆ; ದೇಶದಲ್ಲೇ ಮೊದಲ ಪ್ರಯತ್ನ

ಶಿವಮೊಗ್ಗ : ಕೊರೋನಾ ನಿಯಂತ್ರಣಕ್ಕೆ ಜನರಲ್ಲಿ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುವ ಉದ್ದೇಶದಿಂದ ಶಿವಮೊಗ್ಗ ನಗರದಲ್ಲಿ 4ಲಕ್ಷ ಮಂದಿಗೆ ಆಯುರ್ವೇದಿಕ್ ರೋಗ ನಿರೋಧಕ ಶಕ್ತಿವರ್ಧಕ ಕಿಟ್ ವಿತರಣೆ ಕಾರ್ಯಕ್ಕೆ ಬುಧವಾರ ಚಾಲನೆ ನೀಡಲಾಯಿತು.
ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಈ ವೇಳೆ ಮಾತನಾಡಿ,ಡಾ.ಗಿರಿಧರ ಕಜೆ ಅವರ ಮಾರ್ಗದರ್ಶನದಲ್ಲಿ ಕಿಟ್ ಸಿದ್ಧಪಡಿಸಲಾಗಿದೆ. ಪ್ರಥಮ ಹಂತದಲ್ಲಿ 1ಲಕ್ಷ ಕಿಟ್‍ಗಳು ವಿತರಣೆಗೆ ಸಿದ್ಧವಾಗಿದೆ. ಇನ್ನೂ ಎರಡು ಹಂತಗಳಲ್ಲಿ ಶಿವಮೊಗ್ಗ ನಗರದ ಪ್ರತಿಯೊಬ್ಬರಿಗೂ ಕಿಟ್ ಹಂಚಲಾಗುವುದು. ಇದಕ್ಕಾಗಿ ವಾರ್ಡ್‍ವಾರು ಸಿದ್ಧತೆಗಳನ್ನು ಮಾಡಲಾಗಿದೆ ಎಂದರು.
ಡಾ.ಗಿರಿಧರ ಕಜೆ ಅವರು ಕೊರೋನಾ ಸೋಂಕಿಗೆ ಈಗಾಗಲೇ ಆಯುರ್ವೇದಿಕ್ ಔಷಧ ಸಿದ್ಧಪಡಿಸಿದ್ದು, ಸರ್ಕಾರದ ಹಂತದಲ್ಲಿ ಆದಷ್ಟು ಬೇಗನೆ ಮಾರುಕಟ್ಟೆಗೆ ಬಿಡುಗಡೆ ಮಾಡಲು ಅನುಮತಿಯನ್ನು ನಿರೀಕ್ಷಿಸಲಾಗಿದೆ. ಕೊರೋನಾ ನಿಯಂತ್ರಣಕ್ಕೆ ಆಯುರ್ವೇದ ದಿವ್ಯೌಷಧಿಯಾಗಿದೆ. ಕರೋನಾ ನಿಯಂತ್ರಣಕ್ಕೆ ಜಿಲ್ಲಾಡಳಿತ ಎಲ್ಲಾ ಕ್ರಮಗಳನ್ನು ಕೈಗೊಂಡಿದ್ದು, ಇದಕ್ಕೆ ಸಾರ್ವಜನಿಕರು ಪೂರಕವಾಗಿ ಸ್ಪಂದಿಸುವ ಅಗತ್ಯವಿದೆ ಎಂದು ಹೇಳಿದರು.
ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಡಾ.ಗಿರಿಧರ ಕಜೆ, ಜನರು ಕೊರೋನಾಕ್ಕೆ ಗಾಬರಿಗೊಳ್ಳುವ ಅಗತ್ಯವಿಲ್ಲ. ಆದರೆ ರೋಗವನ್ನು ಕಡೆಗಣಿಸದೆ ಮಾರ್ಗಸೂಚಿಗಳನ್ನು ಪಾಲಿಸಿಕೊಂಡು, ಮನೆ ಮದ್ದಿನ ಮೂಲಕ ನಿಯಂತ್ರಿಸಬಹುದಾಗಿದೆ. ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಿಕೊಂಡರೆ ಇದಕ್ಕೆ ಭಯಪಡುವ ಅಗತ್ಯವಿಲ್ಲ ಎಂದು ಹೇಳಿದರು.
ಶಾಸಕರಾದ ಆಯನೂರು ಮಂಜುನಾಥ, ಆರ್. ಪ್ರಸನ್ನ ಕುಮಾರ್, ಆರ್ಯವೈಶ್ಯ ನಿಗಮದ ಡಿ.ಎಸ್.ಅರುಣ್, ಎಂಎಡಿಬಿ ಅಧ್ಯಕ್ಷ ಕೆ.ಎಸ್.ಗುರುಮೂರ್ತಿ, ಮೇಯರ್ ಸುವರ್ಣಾ ಶಂಕರ್, ಉಪಮೇಯರ್ ಸುರೇಖಾ ಮುರಳೀಧರ,ಆರ್ಎಸ್ಎಸ್ ದಕ್ಷಿಣ ಪ್ರಾಂತ ‌ಸಹಕಾರ್ಯವಾಹ ಪಟ್ಟಾಭಿರಾಮ್ ಮತ್ತಿತರರು ಉಪಸ್ಥಿತರಿದ್ದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss