Wednesday, July 6, 2022

Latest Posts

ಶಿವಸೇನೆ ಪಕ್ಷಕ್ಕೆ ಅಧಿಕೃತ ಸೇರ್ಪಡೆಯಾದ ಬಾಲಿವುಡ್ ನಟಿ ಊರ್ಮಿಳಾ ಮಾತೋಂಡ್ಕರ್

ಹೊಸ ದಿಗಂತ ವರದಿ, ಆನ್ ಲೈನ್ ಡೆಸ್ಕ್

ಬಾಲಿವುಡ್ ಹಿರಿಯ ನಟಿ, ಮಾಜಿ ಕಾಂಗ್ರೆಸ್ ನಾಯಕಿ ಊರ್ಮಿಳಾ ಮಾತೋಂಡ್ಕರ್ ಮಂಗಳವಾರ ಶಿವಸೇನೆ ಪಕ್ಷಕ್ಕೆ ಅಧಿಕೃತವಾಗಿ ಸೇರ್ಪಡೆಯಾಗಿದ್ದಾರೆ. ಕೆಲ ದಿನಗಳ ಹಿಂದೆ ಈ ಬಗ್ಗೆ ಚರ್ಚೆಗಳು ನಡೆಯುತ್ತಿದ್ದು , ಇದೀಗ ಶಿವಸೇನೆ ಪಕ್ಷಕ್ಕೆ ಸೇರುವ ಮೂಲಕ, ಚರ್ಚೆಗಳಿಗೆ ತೆರೆ ಎಳೆದಿದ್ದಾರೆ.
ಮಂಗಳವಾರ ಅಧಿಕೃತವಾಗಿ ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ನಿವಾಸದಲ್ಲಿ ಪಕ್ಷಕ್ಕೆ ಸೇರ್ಪಡೆಗೊಂಡಿದ್ದು, ಉದ್ಧವ್ ಠಾಕ್ರೆ ಅವರ ಪತ್ನಿ ರಶ್ಮಿ ಠಾಕ್ರೆ ಅವರು ನಟಿಯ ಕೈಗೆ ‘ಶಿವ ಬಂಧನ್’ ಎಂಬ ಎಳೆಯನ್ನು ಕಟ್ಟುವ ಮೂಲಕ ಪಕ್ಷಕ್ಕೆ ಬರಮಾಡಿಕೊಂಡರು.
2019ರ ಲೋಕಸಭಾ ಚುನಾವಣೆಯಲ್ಲಿ ಮುಂಬೈ ದಕ್ಷಿಣ ಕ್ಷೇತ್ರದಲ್ಲಿ ಕಾಂಗ್ರೆಸ್ ನಿಂದ ಸ್ಪರ್ಧಿಸಿ ಸೋಲು ಅನುಭವಿಸಿದ್ದ ನಟಿ ಊರ್ಮಿಳಾ ಬಳಿಕ ಕಾಂಗ್ರೆಸ್ ತೊರೆದಿದ್ದರು. ಇದೀಗ ಮತ್ತೆ ರಾಜಕೀಯಕ್ಕೆ ಎಂಟ್ರಿ ಕೊಟ್ಟಿದ್ದಾರೆ.

 

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss