ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Monday, June 21, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ಶಿಸ್ತು ಪಾಲನೆಯಾಗುತ್ತಿರುವ ಇಲಾಖೆ ಎಂದರೆ ಅದು ಪೊಲೀಸ್ ಇಲಾಖೆ: ಸತ್ರ ನ್ಯಾಯಾಧೀಶರಾದ ಶುಭಾ ಗೌಡರ್

ಚಿಕ್ಕಮಗಳೂರು: ಸಮಾಜದಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡಲು ಹಗಲಿರುಲು ಶ್ರಮಿಸುವ ಪೊಲೀಸ್ ಸಿಬ್ಬಂದಿಗಳಿಗೆ ಸಾರ್ವಜನಿಕರು ಸಹಕಾರ ನೀಡಬೇಕು ಎಂದು ಜಿಲ್ಲಾ ಪ್ರಧಾನ ಮತ್ತು ಸತ್ರ ನಾಯಾಧೀಶರಾದ ಶುಭಾ ಗೌಡರ್ ಅವರು ತಿಳಿಸಿದರು.
ಅವರು ಬುಧವಾರ ನಗರದ ರಾಮನಹಳ್ಳಿಯ ಜಿಲ್ಲಾ ಪೊಲೀಸ್ ಸಶಸ್ತ್ರ ಮೀಸಲು ಪಡೆಯ ಹುತಾತ್ಮರ ಸ್ಮಾರಕದ ಆವರಣದಲ್ಲಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಲಾಗಿದ್ದ ಪೊಲೀಸ್ ಹುತಾತ್ಮರ ದಿನ ಕಾರ್ಯಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಿ ಮಾತನಾಡಿದರು.
ನಿಷ್ಠೆಯಿಂದ ಕರ್ತವ್ಯ ನಿರ್ವಹಿಸುವ ಸಮಯದಲ್ಲಿ ಪ್ರಾಣ ತ್ಯಾಗ ಮಾಡಿರುವ ವೀರ ಪೇದೆಗಳನ್ನು ನೆನೆಯುವ ಸದುದ್ದೇಶದಿಂದ ಪೊಲೀಸ್ ಹುತಾತ್ಮರ ದಿನವನ್ನಾಗಿ ಆಚರಿಸುತ್ತ ಬರಲಾಗುತ್ತಿದೆ. ಶಿಸ್ತು ಪಾಲನೆಯಾಗುತ್ತಿರುವ ಇಲಾಖೆ ಎಂದರೆ ಅದು ಪೊಲೀಸ್ ಇಲಾಖೆ ಎಂದರು.
ಇತ್ತೀಚಿನ ದಿನಗಳಲ್ಲಿ ಸಾಮಾಜಿಕ ಜವಾಬ್ದಾರಿ ಮರೆತು ಸಮಾಜದಲ್ಲಿ ಅಶಾಂತಿ ಉಂಟು ಮಾಡಿ ಆಂತರಿಕ ಗಲಬೆಗಳು ಸೃಷ್ಠಿಯಾಗುತ್ತಿದೆ. ಇಂತಹ ಸಂದರ್ಭಗಳಲ್ಲಿ ಶಾಂತಿ ಕಾಪಾಡುವ ವೇಳೆಯಲ್ಲಿ ಕಾರ್ಯನಿರ್ವಹಿಸುವ ಎಷ್ಟೋ ಮಂದಿ ಪೊಲೀಸರು ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ಜನರನ್ನು ಸುರಕ್ಷಿತವಾಗಿರಿಸಲು ಪೊಲೀಸರಿಂದ ಮಾತ್ರ ಸಾಧ್ಯ. ಅವರು ಒಂದು ದಿನ ತಮ್ಮ ಕರ್ತವ್ಯವನ್ನು ನಿರ್ವಹಿಸದಿದ್ದರೆ ಸಮಾಜದಲ್ಲಿ ಅಶಾಂತಿ ಉಂಟಾಗಿ ನೆಮ್ಮದಿಯ ಬದುಕ ನಡೆಸುವುದನ್ನು ಊಹಿಸಲು ಸಾಧ್ಯವಾಗುವುದಿಲ್ಲ ಎಂದರು.
ದೇಶದ ಪ್ರತಿಯೊಬ್ಬ ಪ್ರಜೆಯು ಕೂಡ ಮೊದಲು ನಮ್ಮ ಹಳ್ಳಿ, ಜಿಲ್ಲೆ, ರಾಜ್ಯ, ದೇಶವನ್ನು ಕುಕೃತ್ಯದಿಂದ ದೂರವಿರಿಸಿದಾಗ ಸದೃಢವಾದ ಸಮಾಜವನ್ನು ನಿರ್ಮಿಸಬುಹುದಾಗಿದ್ದು ಆ ಮೂಲಕ ಬಲಿಷ್ಠವಾದ ದೇಶವನ್ನು ಕಟ್ಟಲು ಸಾಧ್ಯವಾಗುತ್ತದೆ ಎಂದರು.
ಕಾರ್ಯಕ್ರಮದಲ್ಲಿ ದೇಶಾದ್ಯಂತ ವಿವಿಧ ರಾಜ್ಯಗಳಲ್ಲಿ ಹುತಾತ್ಮರಾದ 264 ಪೊಲೀಸರನ್ನು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಶೃತಿ ಅವರು ಸ್ಮರಿಸಿದರು.
ಶೃಂಗೇರಿ ಶಾಸಕ ಟಿ.ಡಿ. ರಾಜೇಗೌಡ, ಜಿಲ್ಲಾಧಿಕಾರಿ ಡಾ. ಬಗಾದಿ ಗೌತಮ್, ಸಾಮಾಜಿಕ ವಲಯದ ಅರಣ್ಯಾಧಿಕಾರಿ ಸುನಿಲ್ ಪವಾರ್, ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಬಸವರಾಜ್ ಚೇಂಗಟಿ, ತಹಶೀಲ್ದಾರ್ ಡಾ. ಕಾಂತರಾಜ್, ಕೆ.ಎಸ್.ಆರ್.ಟಿ.ಸಿ ವಿಭಾಗೀಯ ನಿಯಂತ್ರಣಾಧಿಕಾರಿ ವೀರೇಶ್ ಹಾಗೂ ಪೊಲೀಸ್ ಇಲಾಖೆಯ ಸಿಬ್ಬಂದಿಗಳು ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss