Wednesday, August 17, 2022

Latest Posts

ಶೀಘ್ರದಲ್ಲಿ ಮೀನುಗಾರರಿಗೆ ಡೀಸೆಲ್ ಪಾಸ್ ನೀಡಲು ಅಧಿಕಾರಿಗಳಿಗೆ ಶಾಸಕ ರಘುಪತಿ ಭಟ್ ಸೂಚನೆ

ಉಡುಪಿ: ಮಲ್ಪೆಯ ಮೀನುಗಾರಿಕಾ ಬಂದರಿನಿಂದ ಮೀನುಗಾರಿಕೆಗೆ ತೆರಳುವುದಕ್ಕೆ ಶೀಘ್ರದಲ್ಲಿ ಮೀನುಗಾರರಿಗೆ ಡೀಸೆಲ್ ಪಾಸ್ ನೀಡಲು ಉಡುಪಿ ಶಾಸಕ ಕೆ. ರಘುಪತಿ ಭಟ್ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಮಲ್ಪೆ ಮೀನುಗಾರರ ಸಂಘದ ವತಿಯಿಂದ ಸೋಮವಾರ ಸಂಘದ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಶಾಸಕರು ಭಾಗವಹಿಸಿ ಮಾತನಾಡಿದರು.
ಸಭೆಯಲ್ಲಿ ಮೀನುಗಾರಿಕೆಗೆ ಸಂಬಂಧಿಸಿದ ಚರ್ಚೆಗಳು ನಡೆದು, ಬಂದರಿನ ಒಳಗಡೆ ವಾಹನ ನಿಲುಗಡೆಯನ್ನು ಸ್ಥಗಿತಗೊಳಿಸುವುದು, ಬಂದರಿಗೆ ಬರುವ ಬೋಟುಗಳಿಗೆ ಪ್ರತ್ಯೇಕ ವಿಭಾಗದವರು ಅವರ ಸಂಘದ ವತಿಯಿಂದ ಸ್ವಯಂ ಸೇವಕರನ್ನು ನೇಮಿಸಿ ವೈಯಕ್ತಿಕ ಅಂತರವನ್ನು ಕಾಯ್ದುಕೊಂಡು ಬೋಟುಗಳಲ್ಲಿನ ಮೀನುಗಳನ್ನು ಖಾಲಿ ಮಾಡುವ ಬಗ್ಗೆ ತೀರ್ಮಾನಿಸಲಾಯಿತು.
ಈ ಸಂದರ್ಭದಲ್ಲಿ ಮಲ್ಪೆ ಮೀನುಗಾರರ ಸಂಘದ ಅಧ್ಯಕ್ಷ ಕೃಷ್ಣ ಸುವರ್ಣ, ಉಡುಪಿ ಪೊಲೀಸ್ ವೃತ್ತ ನಿರೀಕ್ಷಕ ಮಂಜುನಾಥ್, ಮೀನುಗಾರಿಕಾ ಇಲಾಖೆ ಉಪನಿರ್ದೇಶಕ ಗಣೇಶ್, ಸಹಾಯಕ ನಿರ್ದೇಶಕ ಶಿವಕುಮಾರ್, ಕರಾವಳಿ ಕಾವಲು ಪಡೆಯ ಉಪ ನಿರೀಕ್ಷಕರು ಹಾಗೂ ವಿವಿಧ ಸಂಘದ ಅಧ್ಯಕ್ಷರು, ಸದಸ್ಯರು ಉಪಸ್ಥಿತರಿದ್ದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss

error: Content is protected !!