ಹೊಸ ದಿಗಂತ ವರದಿ, ಚಿತ್ರದುರ್ಗ:
ಮುಂದಿನ ಎರಡು – ಮೂರು ದಿನಗಳಲ್ಲಿ ರಾಜ್ಯ ಸಚಿವ ಸಂಪುಟ ವಿಸ್ತರಣೆ ಮಾಡಲಾಗುವುದು. ಈ ಬಗ್ಗೆ ಇಂದು ಸಂಜೆ ಪಕ್ಷದ ಹೈ ಕಮಾಂಡ್ ಜೊತೆ ಮಾತನಾಡಲಿದ್ದು, ಇನ್ನೆರಡು ದಿನಗಳಲ್ಲಿ ಸಮಸ್ಯೆ ಬಗೆಹರಿಯಲಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದರು.
ನಗರದ ಮುರುಘಾಮಠದಲ್ಲಿ ಮುರುಘಾ ಶ್ರೀ ಪ್ರಾಚ್ಯವಸ್ತು ಸಂಗ್ರಹಾಲಯ ಲೋಕಾರ್ಪಣೆ ಕಾರ್ಯಕ್ರಮಕ್ಕೆ ಭಾನುವಾರ ಆಗಮಿಸಿದ್ದ ಅವರು, ಹೆಲಿಪ್ಯಾಡ್ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು.
ಜಿಲ್ಲೆಯ ಸ್ಥಳೀಯ ಶಾಸಕರಿಗೆ ಈ ಭಾರೀಯ ಸಚಿವ ಸಂಪುಟದಲ್ಲಿ ಸ್ಥಾನ ಸಿಗಲಿದೇಯಾ ಎಂಬ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿ, ದೆಹಲಿಯ ಮುಖಂಡರು ಯಾವ ತೀರ್ಮಾನ ಕೈಗೊಳ್ಳಲಿದ್ದಾರೆ ಅದರ ಮೇಲೆಯೇ ಎಲ್ಲವೂ ನಿರ್ಧರಿಸಲಾಗುವುದು ಎಂದು ಹೇಳಿದರು.
ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲು ಸಹಕಾರಿಯಾದ ೧೭ ವಲಸೆ ಶಾಸಕರುಗಳಲ್ಲಿ ಒಡಕು ಮೂಡಿದ್ದು, ದಿನಂಪ್ರತಿ ಪ್ರತ್ಯೇಕ ಸಭೆಗಳನ್ನು ನಡೆಸುತ್ತಿರುವ ಬಗ್ಗೆ ಕೇಳಿದ ಪ್ರಶ್ನೆಗೆ ಅವರುಗಳ ಬಗ್ಗೆ ಯಾವುದೇ ಚರ್ಚೆ ಮಾಡಲ್ಲಾ ಎಂದರು.
ಶಾಸಕರಾದ ಜಿ.ಹೆಚ್.ತಿಪ್ಪಾರೆಡ್ಡಿ, ಎಂ.ಚಂದ್ರಪ್ಪ, ಗೂಳಿಹಟ್ಟಿ ಡಿ.ಶೇಖರ್, ಹೊಸದುರ್ಗದ ಲಿಂಗಮೂರ್ತಿ ಸೇರಿದಂತೆ ಅನೇಕರು ಈ ಸಂದರ್ಭದಲ್ಲಿ ಹಾಜರಿದ್ದರು.