Monday, August 8, 2022

Latest Posts

ಶೀಘ್ರ ಎಲ್ಲ ಶಾಸಕರ ಸಭೆ ಕರೆದು ಅತಿವೃಷ್ಟಿಯಿಂದ ಆಗಿರುವ ಹಾನಿಗೆ ಸಮರ್ಪಕ ಪರಿಹಾರ

ಬೆಳಗಾವಿ : ಶೀಘ್ರ ಎಲ್ಲ ಶಾಸಕರ ಸಭೆ ಕರೆದು ಅತಿವೃಷ್ಟಿಯಿಂದ ಆಗಿರುವ ಹಾನಿಗೆ ಸಮರ್ಪಕ ಪರಿಹಾರ ನೀಡಲು ಯೋಜನೆ ರೂಪಿಸಲಾಗುವುದು. ಎಲ್ಲ ಮಾಹಿತಿಯನ್ನು ಕೇಂದ್ರ ಸರ್ಕಾರಕ್ಕೆ ಕಳಿಸಲಾಗುವುದು. ಮುಂದಿನ ವಾರ‌ ದೆಹಲಿಗೆ ಹೋಗಿ ಹೆಚ್ವಿನ ಪರಿಹಾರ ಬಿಡುಗಡೆಗೆ ಮನವಿ ಮಾಡಿಕೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದರು.
ಮಂಗಳವಾರ ಅತಿವೃಷ್ಟಿಗೆ ಸಂಬಂಧಿಸಿದಂತೆ ನಗರದ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ನಡೆದ ಧಾರವಾಡ ಮತ್ತು ಬೆಳಗಾವಿ ಜಿಲ್ಲೆಗಳ ಜನಪ್ರತಿನಿಧಿಗಳ ಹಾಗೂ ಹಿರಿಯ ಅಧಿಕಾರಿಗಳ ಸಭೆಯಲ್ಲಿ ಅವರು ಮಾತನಾಡಿದರು.
ಶಾಸಕರು ತಮ್ಮ ತಮ್ಮ ಕ್ಷೇತ್ರದಲ್ಲಿ ಇದ್ದು ಜನರ ಸಮಸ್ಯೆಗಳಿಗೆ ಸ್ಪಂದಿಸುವ ಕೆಲಸ ಮಾಡಬೇಕು. ಕೋವಿಡ್-೧೯ ಇರುವುದರಿಂದ ಎನ್.ಡಿ‌.ಆರ್.ಎಫ್. ಅನುದಾನದಡಿ ತುರ್ತು ಅಗತ್ಯವಿರುವ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಬೇಕು ಎಂದರು.
ಜಿಲ್ಲೆಯಲ್ಲಿ ಆಗಿರುವ ಹಾನಿ ಮತ್ತು ಅಗತ್ಯವಿರುವ ಅನುದಾನದ ಮಾಹಿತಿಯನ್ನು ತಕ್ಷಣ ಸರ್ಕಾರಕ್ಕೆ ಕಳಿಸುವಂತೆ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದರು.
ಪ್ರವಾಹ ನಿರ್ವಹಣೆ ಮತ್ತಿತರ ತುರ್ತು ಕೆಲಸಕ್ಕೆ ಬೆಳಗಾವಿ ಜಿಲ್ಲೆಯಲ್ಲಿ 412 ಕೋಟಿ ರೂಪಾಯಿ ಅನುದಾನ ಲಭ್ಯವಿದೆ. ಹೆಚ್ಚಿನ ಹಣ ಬೇಕಾದರೆ ತಕ್ಷಣವೇ ಬಿಡುಗಡೆ ಮಾಡಲಾಗುವುದು. ಉಳಿದಿರುವ ಅನುದಾನದಲ್ಲಿ ರಸ್ತೆ ದುರಸ್ತಿ ಮತ್ತಿತರ ಕಾಮಗಾರಿ ಕೈಗೊಳ್ಳಲು ಸೂಚನೆ ನೀಡಿದರು.
ಇದೇ ರೀತಿ ಇತರೆ ಜಿಲ್ಲೆಗಳಲ್ಲಿ ಸಾಕಷ್ಟು ಹಣ ಲಭ್ಯವಿದೆ. ಜಿಲ್ಲೆಯಲ್ಲಿ ಆಗಿರುವ ಹಾನಿ ಮತ್ತು ಅಗತ್ಯವಿರುವ ಅನುದಾನದ ಮಾಹಿತಿಯನ್ನು ತಕ್ಷಣ ಸರ್ಕಾರಕ್ಕೆ ಕಳಿಸುವಂತೆ ಜಿಲ್ಲಾಧಿಕಾರಿಗಳಿಗೆ ಸಿಎಂ ಯಡಿಯೂರಪ್ಪ ಸೂಚನೆ ನೀಡಿದರು.
ಬೆಳಗಾವಿ-ಧಾರವಾಡ ಸಮಸ್ಯೆಗಳನ್ನು ಗಮನಕ್ಕೆ ಬಂದಿದ್ದು, ಕೋವಿಡ್-೧೯ ಹಿನ್ನೆಲೆಯಲ್ಲಿ ರಾಜ್ಯದ ಆರ್ಥಿಕ ಪರಿಸ್ಥಿತಿ ಆಧರಿಸಿ ಮನೆ ಹಾಗೂ ಬೆಳೆ ಪರಿಹಾರ ನೀಡಲು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ಬೆಳಗಾವಿ-ಧಾರವಾಡ ಸಮಸ್ಯೆಗಳನ್ನು ಗಮನಕ್ಕೆ ಬಂದಿದ್ದು, ಕೋವಿಡ್-೧೯ ಹಿನ್ನೆಲೆಯಲ್ಲಿ ರಾಜ್ಯದ ಆರ್ಥಿಕ ಪರಿಸ್ಥಿತಿ ಆಧರಿಸಿ ಮನೆ ಹಾಗೂ ಬೆಳೆ ಪರಿಹಾರ ನೀಡಲು ಕ್ರಮ ಕೈಗೊಳ್ಳಲಾಗುವುದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು.
ಡಿಸಿಎಂ ಲಕ್ಷ್ಮಣ ಸವದಿ,ಸಚಿವರಾದ ಬಸವರಾಜ ಬೊಮ್ಮಾಯಿ, ರಮೇಶ ಜಾರಕಿಹೊಳಿ, ಜಗದೀಶ ಶೆಟ್ಟರ, ಆರ್. ಅಶೋಕ, ಶ್ರೀಮಂತ ಪಾಟೀಲ, ಉಪಸಭಾಪತಿ ಆನಂದ ಮಾಮನಿ, ವಿಧಾನ ಪರಿಷತ್ತಿನ ಸರ್ಕಾರದ ಮುಖ್ಯ ಸಚೇತಕ ಮಹಾಂತೇಶ ಕವಟಗಿಮಠ,  ಸಂಸದ ಅಣ್ಣಾ ಸಾಹೇಬ್ ಜೊಲ್ಲೆ, ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ,
ಶಾಸಕರಾದ ಪಿ.ರಾಜೀವ್, ದುರ್ಯೋಧನ ಐಹೊಳೆ, ಉಮೇಶ ಕತ್ತಿ, ಮಹಾಂತೇಶ ಕೌಜಲಗಿ, ಅನಿಲ್ ಬೆನಕೆ, ಶಂಕರಪಾಟೀಲ ಮುನೇನಕೊಪ್ಪ, ಅಮೃತ ದೇಸಾಯಿ, ಮಹಾಂತೇಶ ಕೌಜಲಗಿ, ಮಹಾಂತೇಶ ದೊಡ್ಡಗೌಡ್ರ, ಜಿಲ್ಲಾಧಿಕಾರಿಗಳಾದ ಎಂ.ಜಿ.ಹಿರೇಮಠ, ನಿತೇಶ್ ಪಾಟೀಲ, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಕೆ.ಎಲ್.ಅತೀಕ್, ಮತ್ತಿತರರು ಉಪಸ್ಥಿತರಿದ್ದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss