Wednesday, July 6, 2022

Latest Posts

ಶುಕ್ರವಾರದಿಂದ ಆರಂಭಗೊಂಡ ವಿದ್ಯಾಗಮ: ಮೊದಲ ದಿನವೇ ಶೇ.70ರಷ್ಟು ವಿದ್ಯಾರ್ಥಿಗಳ ಹಾಜರ್

ಹೊಸ ದಿಗಂತ ವರದಿ, ಕಾರವಾರ :

ರಾಜ್ಯ ಸರ್ಕಾರದ ಆದೇಶದಂತೆ ಜಿಲ್ಲೆಯಲ್ಲಿ ವಿದ್ಯಾಗಮ ಕಾರ್ಯಕ್ರಮ ಶುಕ್ರವಾರದಿಂದ ಆರಂಭಗೊಂಡಿದ್ದು , ಮೊದಲ ದಿನವೇ ಶೇ. 70 ರಷ್ಟು ವಿದ್ಯಾರ್ಥಿಗಳು ಶಾಲೆತ್ತ ಮುಖ ಮಾಡಿದ್ದಾರೆ.
ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಪ್ರಿಯಾಂಗಾ ಎಂ ಈ ಬಗ್ಗೆ ಮಾಹಿತಿ ನೀಡಿ ಹರ್ಷವ್ಯಕ್ತಪಡಿಸಿದ್ದಾರೆ.
ಪುನರಾರಂಭವಾದ ವಿದ್ಯಾಗಮ ಕಾರ್ಯಕ್ರಮಕ್ಕೆ ಜಿಲ್ಲೆಯಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ವಿದ್ಯಾರ್ಥಿಗಳು ಖುಷಿಯಿಂದ ಶಾಲೆಯತ್ತ ಮುಖ ಮಾಡಿದ್ದಾರೆ. ಮೊದಲನೇ ದಿನವೇ ಕಾರವಾರ ಮತ್ತು ಶಿರಸಿ ಶೈಕ್ಷಣಿಕ ಜಿಲ್ಲೆಯಲ್ಲಿ 6 ರಿಂದ 10 ತರಗತಿಯಲ್ಲಿ ಶೇಕಡಾ 70 ರಷ್ಟು ವಿದ್ಯಾರ್ಥಿಗಳು ಹಾಜರಾಗಿದ್ದಾರೆ. ಇನ್ನು ಶಿರಸಿ ಶೈಕ್ಷಣಿಕ ಜಿಲ್ಲೆಯಲ್ಲಿ ಒಟ್ಟೂ 10,677 ವಿದ್ಯಾರ್ಥಿಗಳಲ್ಲಿ 6,824 ವಿದ್ಯಾರ್ಥಿಗಳು ಶಾಲೆಗೆ ಹಾಜರಾಗಿದ್ದಾರೆ. ಕಾರವಾರ ಶೈಕ್ಷಣಿಕ ಜಿಲ್ಲೆಯಲ್ಲಿ 9,482 ವಿದ್ಯಾರ್ಥಿಗಳಲ್ಲಿ 6,624 ವಿದ್ಯಾರ್ಥಿಗಳು ತರಗತಿಗೆ ಹಾಜರಾಗಿದ್ದಾರೆ.
ಇನ್ನು ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳು ಕೂಡಾ ಹೆಚ್ಚಿನ ಸಂಖ್ಯೆಯಲ್ಲಿ ತರಗತಿಗೆ ಹಾಜರಾಗಿದ್ದು, ಜಿಲ್ಲೆಯಲ್ಲಿ 13,459 ವಿದ್ಯಾರ್ಥಿಗಳಲ್ಲಿ 5,987 ವಿದ್ಯಾರ್ಥಿಗಳು ತರಗತಿಯಲ್ಲಿ ಪಾಲ್ಗೊಂಡಿದ್ದಾರೆ. ಪಾಲಕರ ಒಪ್ಪಿಗೆ ಪತ್ರ ಕೊಟ್ಟ ಎಲ್ಲಾ ವಿದ್ಯಾರ್ಥಿಗಳು ಇಂದು ಹಾಜರಾಗಿರುವುದಿಲ್ಲ. ಹಾಗೂ ಹಾಸ್ಟೇಲ್ ಆರಂಭ ಆಗದೇ ಇರುವುದರಿಂದ ಶಾಲೆಯಲ್ಲಿ ವಿದ್ಯಾರ್ಥಿಗಳ ಸಂಖ್ಯೆ ಕಡಿಮೆ ಕಂಡುಬಂದಿದೆ ಎಂದು ಅವರು ಮಾಹಿತಿ ನೀಡಿದ್ದಾರೆ

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss