Thursday, July 7, 2022

Latest Posts

ಶುಕ್ರವಾರ ಕೊರೋನಾ ಸೋಂಕಿನಿಂದ ಕಲಬುರಗಿ ನಗರದ ನಾಲ್ವರ ಸಾವು

ಕಲಬುರಗಿ: ಕೊರೋನಾ ಸೋಂಕಿನಿಂದ ಕಲಬುರಗಿ ನಗರದ‌ ನಾಲ್ವರು ನಿಧನರಾಗಿರುವ ಬಗ್ಗೆ ಶುಕ್ರವಾರ ವರದಿಯಾಗಿದ್ದು, ಇದರಿಂದ ಕೊರೋನಾ ಸೋಂಕಿಗೆ ಜಿಲ್ಲೆಯಲ್ಲಿ ಮೃತರಾದವರ ಸಂಖ್ಯೆ 239ಕ್ಕೆ ಏರಿಕೆಯಾಗಿದೆ ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.
ತೀವ್ರ ಉಸಿರಾಟ ತೊಂದರೆ ಮತ್ತು ಅಧಿಕ ರಕ್ತದೊತ್ತಡದಿಂದ ಬಳಲುತ್ತಿದ್ದ ಕಲಬುರಗಿಯ ರಾಜಾಪುರ ಪ್ರದೇಶದ 51 ವರ್ಷದ ಪುರುಷ (P-362656) ಆ.30 ರಂದು ಆಸ್ಪತ್ರೆಗೆ ದಾಖಲಾಗಿ ಸೆ.8 ರಂದು ನಿಧನರಾಗಿದ್ದಾರೆ.
ತೀವ್ರ ಉಸಿರಾಟ ತೊಂದರೆ ಹಿನ್ನೆಲೆಯಿಂದ ಕಲಬುರಗಿಯ ನಂದಿ ಕಾಲೋನಿಯ 57 ವರ್ಷದ ಪುರುಷ (P-374174) ಸೆ.1 ರಂದು ಆಸ್ಪತ್ರೆಗೆ ದಾಖಲಾಗಿ ಸೆ.11 ರಂದು ನಿಧನರಾಗಿದ್ದಾರೆ.
ತೀವ್ರ ಉಸಿರಾಟ ತೊಂದರೆ ಮತ್ತು ಅಧಿಕ ರಕ್ತದೊತ್ತಡದಿಂದ ಬಳಲುತ್ತಿದ್ದ ಕಲಬುರಗಿಯ ಗಂಗಾ‌ ನಗರದ 65 ವರ್ಷದ ವೃದ್ಧೆ (P-396445) ಸೆ.3 ರಂದು ಆಸ್ಪತ್ರೆಗೆ ದಾಖಲಾಗಿ ಸೆ.6 ರಂದು ನಿಧನರಾಗಿದ್ದಾರೆ.
ತೀವ್ರ ಉಸಿರಾಟ ತೊಂದರೆ ಜೊತೆಗೆ ಮಧುಮೇಹ ಮತ್ತು ಅಧಿಕ ರಕ್ತದೊತ್ತಡದಿಂದ ಬಳಲುತ್ತಿದ್ದ ಕಲಬುರಗಿಯ ರೇವಣಸಿದ್ದೇಶ್ವರ ಕಾಲೋನಿಯ 59 ವರ್ಷದ ಪುರುಷ (P-444502) ಸೆ.10 ರಂದು ಆಸ್ಪತ್ರೆಗೆ ದಾಖಲಾಗಿ ಅಂದೇ ನಿಧನರಾಗಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss