ಜಮ್ಮು: ಶೋಪಿಯಾನ್ ಜಿಲ್ಲೆಯಲ್ಲಿ ಕಳೆದ ರಾತ್ರಿಯಿಂದ ಉಗ್ರರು ಮತ್ತು ಭದ್ರತಾ ಪಡೆಗಳ ನಡುವೆ ಗುಂಡಿನ ಚಕಮಕಿ ಆರಂಭವಾಗಿದ್ದು, ಶುಕ್ರವಾರ ನಸುಕಿಗೆ ಓರ್ವ ಉಗ್ರನನ್ನ ಭದ್ರತಾ ಪಡೆಗಳು ಹೊಡೆದುರುಳಿಸಿವೆ.
ಈಗಲೂ ಗುಂಡಿನ ಚಕಮಕಿ ಮುಂದುವರಿದಿದ್ದು, ಕೇಂದ್ರ ಮೀಸಲು ಪೊಲೀಸ್ ಪಡೆಯ ಯೋಧರು 44 ರಾಷ್ಟ್ರೀಯ ರೈಫಲ್ಸ್ ಮತ್ತು ವಿಶೇಷ ಕಾರ್ಯಾಚರಣೆ ಪಡೆಯ ಸಹಾಯದೊಂದಿಗೆ ಪ್ರದೇಶವನ್ನು ಸುತ್ತುವರಿದು ಶೋಧ ಕಾರ್ಯ ನಡೆಸಿದ್ದಾರೆ.