ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ಭದ್ರತಾ ಪಡೆ ಹಾಗೂ ಉಗ್ರರ ನಡುವೆ ಗುಂಡಿನ ಚಕಮಕಿ ನಡೆದಿದ್ದು, ಘಟನೆಯಲ್ಲಿ ನಾಲ್ವರು ಉಗ್ರರನ್ನು ಹೊಡೆದುರುಳಿಸಲಾಗಿದೆ. ಒಬ್ಬನನ್ನು ಸೆರೆಹಿಡಿಯಲಾಗಿದೆ.
ಶೋಪಿಯಾನ್ ಜಿಲ್ಲೆಯ ಕಿಲೋರ ಪ್ರದೇಶದಲ್ಲಿ ಉಗ್ರರು ಅಡಗಿರುವ ಕುರಿತ ನಿಖರ ಮಾಹಿತಿ ಮೇರೆಗೆ ಭದ್ರತಾ ಸಿಬ್ಬಂದಿ ಶೋಧ ಕಾರ್ಯಾಚರಣೆ ನಡೆಸಿದ್ದಾರೆ. ಈ ವೇಳೆ ಭದ್ರತಾ ಸಿಬ್ಬಂದಿ ಮೇಲೆ ಉಗ್ರರು ಗುಂಡು ಹಾರಿಸಿದ್ದು, ಎನ್ಕೌಂಟರ್ ನಡೆಸಿ ಉಗ್ರರನ್ನು ಹತ್ಯೆಗೈಯ್ಯಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.