Thursday, January 28, 2021

Latest Posts

ಶ್ರೀಕ್ಷೇತ್ರ ಅತ್ತೂರು ಪರ್ಪಲೆಗಿರಿ ಪುನರುತ್ಥಾನ: ನ.26-28ರವರೆಗೆ ಅಷ್ಟಮಂಗಲ ಪ್ರಶ್ನಾಚಿಂತನೆ, ಜೀರ್ಣೋದ್ಧಾರ, ಸಂಕಲ್ಪಸಭೆ

ಹೊಸ ದಿಗಂತ ವರದಿ, ಉಡುಪಿ:

ಕಾರ್ಕಳ ತಾಲೂಕು ಹಿಂದು ಜಾಗರಣ ವೆೇದಿಕೆ, ಅತ್ತೂರು ಕೃಷ್ಣ ಗಿರಿ ಕಲ್ಕುಡ ದೈವಸ್ಥಾನ ಟ್ರಸ್ಟ್ ನೇತೃತ್ವದಲ್ಲಿ ಶ್ರೀಕ್ಷೇತ್ರ ಅತ್ತೂರು ಪರ್ಪಲೆಗಿರಿ ಪುನರುತ್ಥಾನ ನಿಮಿತ್ತ ಅಷ್ಟಮಂಗಲ ಪ್ರಶ್ನಾಚಿಂತನೆ ಮತ್ತು ಜೀರ್ಣೋದ್ಧಾರ ಮತ್ತು ಸಂಕಲ್ಪ ಸಭೆ ನ. 26ರಿಂದ 28ರವರೆಗೆ ನಡೆಯಲಿದೆ ಎಂದು ಹಿಂ.ಜಾ.ವೇ. ಮಂಗಳೂರು ವಿಭಾಗದ ಪ್ರ.ಕಾರ್ಯದರ್ಶಿ ಪ್ರಕಾಶ ಕುಕ್ಕೆಹಳ್ಳಿ ತಿಳಿಸಿದ್ದಾರೆ.
ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಪ್ರಶ್ನಾಚಿಂತನೆ ದಕ್ಷಿಣ ಭಾರತದ ಖ್ಯಾತ ದೈವಜ್ಞ ನಾರಾಯಣ ಪೊದುವಾಳ್ ಮತ್ತು ಹಿರಿಯ ಧಾರ್ಮಿಕ ಚಿಂತಕ ಹಿರಣ್ಯ ವೆಂಕಟೇಶ್ ಭಟ್ ಅವರ ನೇತೃತ್ವದಲ್ಲಿ ನಡೆಯಲಿದೆ. ಇದಕ್ಕೆ ವಿವಿಧ ಭಾಗಗಳಿಂದ ಗಣ್ಯರು ಆಗಮಿಸಲಿದ್ದಾರೆ ಎಂದರು.
ಈ ಅಷ್ಟಮಂಗಲ ಪ್ರಶ್ನಾ ಚಿಂತನೆಯಲ್ಲಿ ಕಾರ್ಕಳ ಇತಿಹಾಸಕ್ಕೆ ಸಂಬಂಧಿಸಿದ ಅನೇಕ ಸಂಗತಿಗಳು ಮುನ್ನೆಲೆಗೆ ಬರುವ ಸಾಧ್ಯತೆ ಇದೆ. ಕಾರ್ಕಳದ ಅತ್ತೂರು ಗ್ರಾಮದಲ್ಲಿರುವ ಪರ್ಪಲೆ ಗುಡ್ಡದ ಮೇಲೆ ಅನೇಕ ಶತಮಾನಗಳಿಂದ ಸುಪ್ತಾವಸ್ಥೆಯಲ್ಲಿರುವ ದೈವ ಸಾನಿಧ್ಯವನ್ನು ಮತ್ತೆ ಜಾಗೃತ ಸ್ಥಿತಿಗೆ ತರಲು ಗ್ರಾಮಸ್ಥರು ಮುಂದಾಗಿದ್ದಾರೆ ಎಂದು ತಿಳಿಸಿದರು.
ಕಾರ್ಕಳ ನಗರ ಮತ್ತು ಅತ್ತೂರು ಸುತ್ತಮುತ್ತಲಿನ ಹಲವಾರು ಕಡೆ ದೇವಸ್ಥಾನದ ಜೀರ್ಣೋದ್ಧಾರಕ್ಕೆ ಮುಂದಾದಾಗ ಈ ಕ್ಷೇತ್ರವನ್ನು ಮೊದಲು ಜೀರ್ಣೋದ್ಧಾರ ಮಾಡುವಂತೆ ಅಷ್ಟಮಂಗಲ ಪ್ರಶ್ನೆಯಲ್ಲಿ ಕಂಡು ಬಂದಿದೆ. ಇಲ್ಲಿ ದೈವಿಶಕ್ತಿಗಳು ಚರಾವಸ್ಥೆಯಲ್ಲಿರುವುದರಿಂದ ಗ್ರಾಮಸ್ಥರಿಗೆ ಸಮಸ್ಯೆಗಳು ಎದುರಾಗುತ್ತಿದೆ. ಸೂಕ್ತ ಮುಂದಾಳತ್ವ ಇಲ್ಲದ ಕಾರಣ ಜೀರ್ಣೋದ್ಧಾರ ಕಾರ್ಯಕ್ಕೆ ಯಾರು ಕೂಡ ಕೈ ಹಾಕುತ್ತಿರಲಿಲ್ಲ. ಈ ಕೆಲಸಕ್ಕೆ ಹಿಂದು ಜಾಗರಣ ವೇದಿಕೆ ಮುಂದಾಳತ್ವ ವಹಿಸಿದೆ ಎಂದರು.
ಸುದ್ದಿಗೋಷ್ಠಿಯಲ್ಲಿ ಶ್ರೀಕೃಷ್ಣ ಗಿರಿ ಕಲ್ಕುಡ ದೇವಸ್ಥಾನದ ಟ್ರಸ್ಟ್ ಅಧ್ಯಕ್ಷ ಪ್ರಶಾಂತ ನಾಯಕ್, ಪ್ರಮುಖರಾದ ದಿನೇಶ್ ಶೆಟ್ಟಿ ಹೆಬ್ರಿ, ಗುರುಪ್ರಸಾದ್ ನಾರಾವಿ, ಚಂದ್ರಶೇಖರ್ ಶೆಟ್ಟಿ, ರಾಜೇಶ್ ರಿಕೇಶ್, ಚಂದ್ರಶೇಖರ್, ಮಹೇಶ್ ಇದ್ದರು.

ಸುದ್ದಿ ಇಷ್ಟವಾಯ್ತಾ, ಇತರರಿಗೂ ಶೇರ್ ಮಾಡಿ, ಓದಿಸಿ.

Whatsapp Group
Telegram

Latest Posts

Don't Miss

error: Content is protected !!