Thursday, August 18, 2022

Latest Posts

ಶ್ರೀಗಂಧದ ಮರ ಕಳವು: ನಾಲ್ವರು ಅಂತಾರಾಜ್ಯ ಕಳ್ಳರ ಬಂಧನ

ಹೊಸದಿಗಂತ ವರದಿ, ಮೈಸೂರು:

ಶ್ರೀಗಂಧದ ಮರ ಕಳ್ಳತನ ಮಾಡುತ್ತಿದ್ದ ನಾಲ್ವರು ಅಂತಾರಾಜ್ಯ ಕಳ್ಳರನ್ನ ಮೈಸೂರಿನ ನಜರ್ ಬಾದ್ ಠಾಣೆಯ ಪೊಲೀಸರು ಬಂಧಿಸಿದ್ದಾರೆ.
ತಮಿಳುನಾಡು ರಾಜ್ಯದ ಈರೋಡ್‌ನ ನಿವಾಸಿಗಳಾದ ಭೂಪತಿ, ಪ್ರಾನ್ಸಿಸ್, ಸೆಂದಿಲ್ ಕುಮಾರ್ ಹಾಗೂ ಪ್ರವೀಣ್ ಕುಮಾರ್ ಬಂಧಿತ ಆರೋಪಿಗಳು ಬಂಧಿತರು. ಈ ನಾಲ್ವರು ಸರ್ಕಾರಿ ಕಚೇರಿ ಆವರಣದಲ್ಲೇ ಗಂಧದ ಮರ ಕದಿಯುತ್ತಿದ್ದರು ಎನ್ನಲಾಗಿದೆ. ಒಟ್ಟು 10ಕ್ಕೂ ಹೆಚ್ಚು ಪ್ರಕರಣದಲ್ಲಿ ಭಾಗಿಯಾಗಿದ್ದು, ಆರೋಪಿಗಳಿಂದ 5ಲಕ್ಷ ಮೌಲ್ಯದ 46 ಕೆ.ಜಿ ಶ್ರೀಗಂಧ ಹಾಗೂ ಕಾರು ವಶಕ್ಕೆ ಪಡೆಯಲಾಗಿದೆ.
ಪ್ರಮುಖ ಆರೋಪಿ ರಾಹಿಲ್ ನಾಪತ್ತೆಯಾಗಿದ್ದಾನೆ. ಹಗಲು ಹೊತ್ತಿನಲ್ಲಿ ಮರಗಳ ಗುರುತು ಮಾಡಿ ರಾತ್ರಿ ವೇಳೆ ಆರೋಪಿಗಳು ಕಳ್ಳತನ ಮಾಡುತ್ತುದ್ದರು ಮೈಸೂರಿನಲ್ಲಿ ಕಳ್ಳತನ ಮಾಡಿ ತಮಿಳುನಾಡಿನಲ್ಲಿ ಶ್ರೀಗಂಧ ಮರವನ್ನು ಮಾರಾಟ ಮಾಡುತ್ತಿದ್ದರು. ಈ ನಡುವೆ ನಜರ್ ಬಾದ್ ಠಾಣಾ ವ್ಯಾಪ್ತಿಯಲ್ಲಿ ಕಳ್ಳತನ ಮಾಡುವಾಗ ಆರೋಪಿಗಳು ಪೊಲೀಸರ ಬಲೆಗೆ ಬಿದ್ದಿದ್ದಾರೆ ಎಂದು ಡಿಸಿಪಿ ಗೀತಾ ಪ್ರಸನ್ನ ತಿಳಿಸಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss

error: Content is protected !!