Monday, July 4, 2022

Latest Posts

ಶ್ರೀನಿವಾಸ ಮನೆ‌ ಮೇಲೆ‌ ದಾಳಿ ನಡೆಸಿದ ಬಗ್ಗೆ ಕೈ ನಾಯಕರು ಯಾಕೆ ಮೌನ ವಹಿಸಿದ್ದಾರೆ: ಬಿಜೆಪಿ ರಾಜ್ಯ ಕಾರ್ಯದರ್ಶಿ‌

ಬಾಗಲಕೋಟೆ : ಬೆಂಗಳೂರಿನ ಡಿಜೆ‌ ಹಳ್ಳಿ ಹಾಗೂ ಕೆ.ಜೆ.ಹಳ್ಳಿಯಲ್ಲಿ ನಡೆದ‌ ಗಲಭೆ‌ ಹಾಗೂ ದಲಿತ ಶಾಸಕ ಅಖಂಡ ಶ್ರೀನಿವಾಸ ಮನೆ‌ ಮೇಲೆ‌ ದಾಳಿ ನಡೆಸಿದವ ಬಗ್ಗೆ ಕಾಂಗ್ರೆಸ್ ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಡಿ.ಕೆ.ಶಿವುಕುಮಾರ ಯಾಕೆ‌ ಮೌನ ವಹಿಸಿದ್ದಾರೆ. ಯಾವುದೇ ಹೇಳಿಕೆಯನ್ನು ಸಹ ನೀಡುತ್ತಿಲ್ಲ ಎಂದು ಬಿಜೆಪಿ ರಾಜ್ಯ ಕಾರ್ಯದರ್ಶಿ‌ ಆರೋಪಿಸಿದರು.

ನಗರದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ‌ ಅವರು, ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ನಾಯಕರು‌ ಗಲಾಟೆ‌ ಮಾತನಾಡಿದವರ ಬಗ್ಗೆ ಮಾತನಾಡದೇ ಹಾಗೂ ಎರಡೂ ಸಮಾಜದ ಹಿರಿಯರೊಂದಿಗೆ ಮಾತುಕತೆ ನಡೆಸಿ ಸಮಸ್ಯೆ ಪರಿಹಾರ ಕಂಡುಕೊಳ್ಳಬೇಕು ಎಂದು‌ ಹೇಳಿಕೆ ನೀಡುತ್ತಿದ್ದಾರೆ. ಅವರದೇ ಪಕ್ಷದ ಶಾಸಕನಿಗೆ ರಕ್ಷಣೆ ಇಲ್ಲ ಎಂದರು.

ಕಾಂಗ್ರೆಸ್ ಪಕ್ಷ ದಲಿತರನ್ನು ರಕ್ಷಣೆ ಮಾಡುತ್ತಿಲ್ಲ ಕೇವಲ ಅವರನ್ನು ಮತಬ್ಯಾಂಕ್ ಮಾಡಿಕೊಂಡಿದ್ದಾರೆ. ರಾಜ್ಯದ ಯಾವುದೇ ಭಾಗದಲ್ಲಿ ಕೂಡ ಕಾಂಗ್ರೆಸ್ ನಾಯಕರು ಬೆಂಗಳೂರಿನಲ್ಲಿ ನಡೆದ ಘಟನೆ ಬಗ್ಗೆ ಯಾಕೆ ಮಾತನಾಡುತ್ತಿಲ್ಲ. ಇನ್ನೂ ದಲಿತ ಸಂಘಟನೆಗಳು ಸಹ ದಲಿತ ಶಾಸಕನ ಮನೆ ಮೇಲೆ ನಡೆದ ದಾಳಿ ಹಾಗೂ ಸಾರ್ವಜನಿಕ ಆಸ್ತಿ ಪಾಸ್ತಿ ಹಾನಿ ಕುರಿತು ಧ್ವನಿ ಎತ್ತುತ್ತಿಲ್ಲ ಎಂದು ದೂರಿದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss