Tuesday, August 16, 2022

Latest Posts

ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ನಿಂದ ಇಂದು ಮಹತ್ವದ ಸಭೆ

ಹೊಸದಿಗಂತ ವರದಿ,ಉಡುಪಿ:

ಅಯೋಧ್ಯೆಯ ರಾಮ ಜನ್ಮಭೂಮಿಯಲ್ಲಿ ಭವ್ಯ ಮಂದಿರ ನಿರ್ಮಾಣದ ಜವಾಬ್ದಾರಿ ಹೊಂದಿರುವ ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ಸಭೆಯು ಇಂದು ದಿಲ್ಲಿಯಲ್ಲಿ ನಡೆಯಲಿದೆ.

ಇಂದು ಮಧ್ಯಾಹ್ನ 3 ಗಂಟೆಯಿಂದ ತೀನ್ ಮೂರ್ತಿ ಭವನದ ಸೆಮಿನಾರ್ ಹಾಲ್‌ನಲ್ಲಿ ಸಭೆ ಜರಗಲಿದೆ. ಈ ಸಭೆಯಲ್ಲಿ ಮಹತ್ವದ ನಿರ್ಧಾರಗಳನ್ನು ಕೈಗೊಳ್ಳಲಾಗುತ್ತದೆ.

ಟ್ರಸ್ಟ್‌ನ ಅಧ್ಯಕ್ಷ ಅಯೋಧ್ಯೆಯ ಮಹಾಂತ ಶ್ರೀನೃತ್ಯಗೋಪಾಲದಾಸ್ ಮಹಾರಾಜ್ ಅವರಿಗೆ ಆರೋಗ್ಯವಿಲ್ಲದಿರುವುದರಿಂದ ಅವರು ಸಭೆಯಲ್ಲಿ ಪಾಲ್ಗೊಳ್ಳುತ್ತಿಲ್ಲ. ಅವರ ಅನುಪಸ್ಥಿತಿಯಲ್ಲಿ ಟ್ರಸ್ಟ್‌ನ ಕೋಶಾಧ್ಯಕ್ಷ ಸ್ವಾಮಿ ಗೋವಿಂದ ದೇವ್ ಗಿರಿ, ಕಾರ್ಯದರ್ಶಿ ಚಂಪತ್ ರಾಯ್ ಅವರು ಸಭೆಯ ನೇತೃತ್ವ ವಹಿಸಲಿದ್ದಾರೆ. ಟ್ರಸ್ಟ್‌ನ ವಿಶ್ವಸ್ಥರಾದ ಪೇಜಾವರ ಮಠಾಧೀಶ ಶ್ರೀವಿಶ್ವಪ್ರಸನ್ನತೀರ್ಥ ಸ್ವಾಮೀಜಿ ಅವರೂ ಸೇರಿದಂತೆ ಉಳಿದೆಲ್ಲ ವಿಶ್ವಸ್ಥರು ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ.

ಪ್ರಸ್ತುತ ಹೊಸದಿಲ್ಲಿಯ ಬಕ್ಕರ್ವಾಲಾದ ಆನಂದಧಾಮ ಆಶ್ರಮದಲ್ಲಿ ವಿಶ್ವ ಹಿಂದು ಪರಿಷತ್ತಿನ ಕೇಂದ್ರೀಯ ಮಾರ್ಗದರ್ಶಕ ಮಂಡಳಿಯ ಸಭೆ ನಡೆಯುತ್ತಿದ್ದು, ಅಲ್ಲಿ ಕೈಗೊಂಡಿರುವ ತೀರ್ಮಾನಗಳು ಸಂಜೆ ನಡೆಯುವ ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಸಭೆಯಲ್ಲಿಯೂ ಪ್ರಸ್ತಾವವಾಗಲಿವೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss