ಶ್ರೀರಂಗಪಟ್ಟಣ : ಅಯೋಧ್ಯೆಯಲ್ಲಿ ಶ್ರೀ ರಾಮ ಮಂದಿರ ನಿರ್ಮಾಣಕ್ಕೆ ಶಂಕು ಸ್ಥಾಪನೆ ನೆರವೇರಿಸಿದ ಹಿನ್ನಲೆ ಪಟ್ಟಣದಲ್ಲಿ ಬಿಜೆಪಿ ಕಾರ್ಯಕರ್ತರು ಹಾಗೂ ಹಿಂದೂ ಜಾಗರಣಾ ವೇದಿಕೆ ವತಿಯಿಂದ ಶ್ರೀ ರಾಮಮಂದಿರ ಹಾಗೂ ಆಂಜನೇಯ ದೇವಾಲಯಗಳಲ್ಲಿ ವಿಶೇಷ ಪೂಜೆ, ಭಜನೆ ನೆರವೇರಿಸಿ ಕರಸೇವಕರನ್ನು ಸನ್ಮಾನಿಸಿದರು.
ಪಟ್ಟಣದ ಬಿಜೆಪಿ ಕಚೇರಿಯಲ್ಲಿ ತಾಲೂಕು ಅಧ್ಯಕ್ಷ ಎ.ಟಿ.ಜಯಕುಮಾರ್, ಜಿಲ್ಲಾ ಉಪಾಧ್ಯಕ್ಷ ಟಿ.ಶ್ರೀಧರ್, ಮುಖಂಡ ಕೆ.ಎಸ್.ನಂಜುಂಡೇಗೌಡ, ಉಮಾಶಂಕರ್ ನೇತೃತ್ವದಲ್ಲಿ ಶ್ರೀ ರಾಮನ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಅಯೋದ್ಯೆಯಲ್ಲಿ ಕರಸೇವಕರಾಗಿ ಶ್ರೀರಂಗಪಟ್ಟಣದಿಂದ ತೆರಳಿದ್ದ, 20ಕ್ಕೂ ಹೆಚ್ಚು ಕರ ಸೇವಕರನ್ನು ಸನ್ಮಾನಿಸಲಾಯಿತು.