Wednesday, July 6, 2022

Latest Posts

ಶ್ರೀರಾಮ ಮಂದಿರ ನಿರ್ಮಾಣ ನಿಧಿ ಸಮರ್ಪಣೆ ಅಭಿಯಾನದಲ್ಲಿ ಪಾಲ್ಗೊಂಡ ಸಂಸದ ಜಿ.ಎಂ.ಸಿದ್ದೇಶ್ವರ

ಹೊಸ ದಿಗಂತ ವರದಿ, ದಾವಣಗೆರೆ:

ಇಲ್ಲಿನ ವಿದ್ಯಾನಗರದಲ್ಲಿ ಬುಧವಾರ ಸಂಜೆ ಸಂಸದ ಜಿ.ಎಂ.ಸಿದ್ದೇಶ್ವರ ಅವರು ಶ್ರೀರಾಮ ಮಂದಿರ ನಿರ್ಮಾಣ ನಿಧಿ ಸಮರ್ಪಣೆ ಅಭಿಯಾನದಲ್ಲಿ ಪಾಲ್ಗೊಂಡಿದ್ದರು.
ಸಂಸದರು ವಿದ್ಯಾನಗರದ ಈಶ್ವರ ಪಾರ್ವತಿ ಗಣಪತಿ ದೇವಸ್ಥಾನದಿಂದ ಆರಂಭಿಸಿ ಸುತ್ತಮುತ್ತಲಿನ ಪ್ರದೇಶಗಳ ಮನೆ-ಮನೆಗೆ ತೆರಳಿ, ಸಾರ್ವಜನಿಕರಿಂದ ಅಯೋಧ್ಯೆ ಶ್ರೀರಾಮಮಂದಿರ ನಿರ್ಮಾಣಕ್ಕೆದೇಣಿಗೆ ಸಂಗ್ರಹಿಸಿದರು. ಅಭಿಯಾನದಲ್ಲಿ ಬಿಜೆಪಿ ಮಾಜಿ ಜಿಲ್ಲಾಧ್ಯಕ್ಷ ಯಶವಂತರಾವ್ ಜಾಧವ್, ಮಹಾನಗರ ಪಾಲಿಕೆ ಸದಸ್ಯ ಎಸ್.ಟಿ‌.ವೀರೇಶ, ಬಿಜೆಪಿ ರೈತ ಮೋರ್ಚಾ ಜಿಲ್ಲಾಧ್ಯಕ್ಷ ಲೋಕಿಕೆರೆ ನಾಗರಾಜ, ಸ್ಥಳೀಯ ಪಾಲಿಕೆ ಸದಸ್ಯೆ ಶೋಭಾ ಸೇರಿದಂತೆ ಆ ಭಾಗದ ಮುಖಂಡರು, ಗಣ್ಯರು ಪಾಲ್ಗೊಂಡಿದ್ದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss