spot_img

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Saturday, September 18, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ಶ್ರೀರಾಮ ಮಂದಿರ ಭೂಮಿ ಪೂಜೆ: ಅಪೂರ್ವ ಸಂಭ್ರಮಕ್ಕೆ ಸಾಕ್ಷಿಯಾಗಲಿದ್ದಾರೆ ಶ್ರೀನಿರ್ಮಲಾನಂದನಾಥ ಸ್ವಾಮೀಜಿ

- Advertisement -Nitte

ಉಡುಪಿ: ಧರ್ಮನಗರಿ ಅಯೋಧ್ಯೆ ಜನ್ಮಭೂಮಿಯಲ್ಲಿ ಆ. 5ರಂದು ನಡೆಯುವ ಭೂಮಿ ಪೂಜನಾ ಕಾರ್ಯಕ್ರಮದಲ್ಲಿ ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ವಿಶ್ವಸ್ಥರಾದ ಪೇಜಾವರ ಮಠಾಧೀಶ ಶ್ರೀವಿಶ್ವಪ್ರಸನ್ನತೀರ್ಥ ಸ್ವಾಮೀಜಿ ಭಾಗವಹಿಸುತ್ತಿಲ್ಲ. ಆದರೆ ಆದಿಚುಂಚನಗಿರಿ ಶ್ರೀನಿರ್ಮಲಾನಂದನಾಥ ಸ್ವಾಮೀಜಿ ಈ ಅಪೂರ್ವ ಘಟನೆಗೆ ಸಾಕ್ಷಿಯಾಗುತ್ತಾರೆ.
ಚಾತುರ್ಮಾಸ್ಯ ವ್ರತದ ಹಿನ್ನೆಲೆಯಲ್ಲಿ ಪೇಜಾವರ ಶ್ರೀವಿಶ್ವಪ್ರಸನ್ನತೀರ್ಥ ಸ್ವಾಮೀಜಿ ಅವರಿಗೆ ಭೂಮಿ ಪೂಜೆಗೆ ತೆರಳಲು ಸಾಧ್ಯವಾಗುತ್ತಿಲ್ಲ. ತಾವು ಭೌತಿಕವಾಗಿ ಅಲ್ಲದಿದ್ದರೂ ಭಾವನಾತ್ಮಕವಾಗಿ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿದ್ದೇನೆ. ಪೇಜಾವರ ಮಠದ ಉಪಾಸ್ಯ ದೇವರಾದ ಶ್ರೀರಾಮ ವಿಠ್ಠಲ ದೇವರಿಗೆ ಲಕ್ಷ ತುಲಸಿ ಅರ್ಚನೆ, ವಿಷ್ಣುಸಹಸ್ರನಾಮ, ರಾಮ-ಮುಖ್ಯಪ್ರಾಣ ಮಂತ್ರ ಜಪ-ಯಾಗ ನಡೆಯಲಿದೆ ಎಂದು ಪೇಜಾವರ ಶ್ರೀಗಳು ತಿಳಿಸಿದ್ದಾರೆ.
ಬೆಂಗಳೂರು ಆದಿಚುಂಚನಗಿರಿ ಶಾಖಾ ಮಠದಲ್ಲಿರುವ ಶ್ರೀನಿರ್ಮಲಾನಂದನಾಥ ಸ್ವಾಮೀಜಿ ಆ. 5ರಂದು ಅಯೋಧ್ಯೆಗೆ ಭೇಟಿ ನೀಡುತ್ತಾರೆ. ಅಂದು ಪ್ರಧಾನಿ ನರೇಂದ್ರ ಮೋದಿ ಅವರು ರಾಮಮಂದಿರಕ್ಕೆ ನಡೆಸುವ ಭೂಮಿ ಪೂಜೆ ಕಾರ್ಯಕ್ರಮದಲ್ಲಿ ಭಾಗಿಯಾಗುತ್ತಾರೆ. ಸದ್ಯದ ಮಾಹಿತಿಯಂತೆ ಆದಿಚುಂಚನಗಿರಿ ಸ್ವಾಮೀಜಿ ಮಾತ್ರ ಕರ್ನಾಟಕದಿಂದ ಭಾಗವಹಿಸುತ್ತಿದ್ದಾರೆ ಎಂದು ಪೇಜಾವರ ಶ್ರೀವಿಶ್ವಪ್ರಸನ್ನತೀರ್ಥ ಸ್ವಾಮೀಜಿ ತಿಳಿಸಿದ್ದಾರೆ.

- Advertisement -Srinivas collage

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss