Tuesday, August 16, 2022

Latest Posts

ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಅವರಿಗೆ ಕೊರೊನಾ ಸೋಂಕು ದೃಢ: ಶ್ರೀ ರಾಮ ಸೇನೆ ಕಾರ್ಯಕರ್ತರಿಂದ ಉರುಳುಸೇವೆ

ಬಳ್ಳಾರಿ: ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಜೀ ಅವರಿಗೆ ನೋವೆಲ್ ಕೊರೊನಾ ಇರುವುದು ದೃಢಪಟ್ಟ ಹಿನ್ನೆಲೆಯಲ್ಲಿ ಶೀಘ್ರ ಗುಣಮುಖರಾಗಲಿ ಎಂದು ಪ್ರಾರ್ಥಿಸಿ ಇಲ್ಲಿನ ಶ್ರೀರಾಮ ಸೇನೆ ಕಾರ್ಯಕರ್ತರು, ಅಭಿಮಾನಿಗಳು ಜಿಲ್ಲೆಯ ‌ಕೂಡ್ಲಗಿ ತಾಲೂಕಿನ ಚಿಕ್ಕ ಜೋಗಿಹಳ್ಳಿ ಗ್ರಾಮದ ಶ್ರೀ ಆಂಜಿನೇಯ ಸ್ವಾಮೀ ದೇವಾಲಯದಲ್ಲಿ ವಿಶೇಷ ಪೂಜೆ, ಅರ್ಚನೆ, ಹೋಮ ಹವನ ಹಾಗೂ ಉರುಳು ಸೇವೆ ಮಾಡಿ‌ದರು.

ಜಿಲ್ಲೆಯ ಪ್ರಸಿದ್ಧ ಧಾರ್ಮಿಕ ಕ್ಷೇತ್ರ ಕೂಡ್ಲಿಗಿ ತಾಲೂಕಿನ ಚಿಕ್ಕಜೋಗಿಹಳ್ಳಿ ಗ್ರಾಮದ ಶ್ರೀ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಶ್ರೀ ರಾಮ ಸೇನೆ ಜಿಲ್ಲಾಧ್ಯಕ್ಷ ಸಂಜೀವ‌ ಮರಡಿ ಸೇರಿದಂತೆ ವಿವಿಧ ಕಾರ್ಯಕರ್ತರು ಭಾನುವಾರ ಬೆಳಿಗ್ಗೆ ಶ್ರೀ ಮೃತ್ಯುಂಜಯ ಹೋಮ ಸೇರಿದಂತೆ ವಿವಿಧ ಪೂಜೆಗಳನ್ನು ನೆರವೇರಿಸಿ ಉರುಳು ಸೇವೆ ಮಾಡಿದರು. ಈ ಸಂದರ್ಭದಲ್ಲಿ ದೇವಾಲಯದ ಪ್ರಧಾನ ಅರ್ಚಕರು, ಅಭಿಮಾನಿಗಳು, ಶ್ರೀರಾಮ ಸೇನೆ ಕಾರ್ಯಕರ್ತರು ಇತರರು ಉಪಸ್ಥಿತರಿದ್ದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss