ಕೊಲಂಬೊ: ಶ್ರೀಲಂಕಾದಲ್ಲಿ ಗೋಹತ್ಯೆ ನಿಷೇಧಕ್ಕೆ ಶ್ರೀಲಂಕಾ ಸರ್ಕಾರ ಒಪ್ಪಿಗೆ ನೀಡಿದ್ದು,ಇದೊಂದು ಐತಿಹಾಸಿಕ ನಿರ್ಧಾರವಾಗಿದೆ.
ಪ್ರಧಾನಿ ಮಹಿಂದ ರಾಜಪಕ್ಸೆ ನೇತೃತ್ವದಲ್ಲಿ ನಡೆದ ಸಚಿವ ಸಂಪುಟದಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ. ಬೌದ್ಧ ಧರ್ಮೀಯರೇ ಅಧಿಕವಾಗಿರುವ ದ್ವೀಪ ಶ್ರೀಲಂಕಾದಲ್ಲಿ ಗೋಹತ್ಯೆ ನಿಷೇಧವಾಗಿದೆ.
ಶೀಘ್ರವೇ ಸಂಪುಟವು ಪ್ರಾಣಿಗಳ ಕಾಯ್ದೆಗೆ ತಿದ್ದುಪಡಿ ತರುವ ಮತ್ತು ಗೋಹತ್ಯೆ ನಿಷೇಧಕ್ಕೆ ಸುಗ್ರೀವಾಜ್ಞೆ ಹೊರಡಿಸುವ ಕೆಲಸ ಮಾಡಲಿದೆ ಎಂದು ಶ್ರೀಲಂಕಾ ಸಂಪುಟದ ವಕ್ತಾರ ಕೆಹೆಲಿಯಾ ರಾಮ್ ಬುಕ್ವೆಲ್ಲಾ ಹೇಳಿದ್ದಾರೆ.
ಇನ್ನು ಗೋಮಾಂಸ ಸೇವನೆ ಮಾಡುವವರ ಅನುಕೂಲಕ್ಕಾಗಿ ಗೋಮಾಂಸ ಆಮದು ಮಾಡಿಕೊಂಡು ರಿಯಾಯಿತಿ ದರದಲ್ಲಿ ಮಾರಾಟ ಮಾಡಲು ಸಂಪುಟ ನಿರ್ಧರಿಸಿದೆ.