ಬಳ್ಳಾರಿ: ಹೊಸಪೇಟೆ ನಗರದ ಸುಪ್ರಸಿದ್ದ ಶ್ರೀ ಅಭಯ ಆಂಜಿನೇಯ ಸ್ವಾಮೀ ದೇವಾಲಯದಲ್ಲಿ ಅರಣ್ಯ, ಪರಿಸರ, ಜೀವಶಾಸ್ತ್ರ ಖಾತೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಆನಂದ್ ಸಿಂಗ್ ಅವರು ಶನಿವಾರ ವಿಶೇಷ ಪೂಜೆ, ಅರ್ಚನೆ ಸಲ್ಲಿಸಿ ದೇವರ ದರ್ಶನ ಪಡೆದರು. ಇದಕ್ಕೂ ಮುನ್ನ ಸುಮಾರು ಅಡಿ ಎತ್ತರದಲ್ಲಿ ನಿರ್ಮಿಸಿದ ಶ್ರೀ ಆಂಜಿನೇಯ ಮೂರ್ತಿಗೆ ವಿಶೇಷ ಪೂಜೆ ಸಲ್ಲಿಸಿ, ಭಕ್ತಿ ಸಮರ್ಪಿಸಿದರು. ಈ ಸಂದರ್ಭದಲ್ಲಿ ಹೂಡಾ ಅಧ್ಯಕ್ಷ ಅಶೋಕ್ ಜೀರೆ, ಆಪ್ತ ಸಹಾಯಕರಾದ ಮುನ್ನಾ ಭಾಯಿ, ಸಂದೀಪ್ ಸಿಂಗ್ ಸೇರಿದಂತೆ ವಿವಿಧ ಮುಖಂಡರು, ಆನಂದ್ ಸಿಂಗ್ ಅವರ ಅಭಿಮಾನಿಗಳು ಉಪಸ್ಥಿತರಿದ್ದರು.