ಹೊಸದಿಗಂತ ಆನ್ ಲೈನ್ ಡೆಸ್ಕ್:
ಅಯೋಧ್ಯೆಯಲ್ಲಿ ನಿರ್ಮಾಣವಾಗುತ್ತಿರುವ ರಾಮ ಮಂದಿರಕ್ಕೆ ಭಾರತ ತಂಡದ ಮಾಜಿ ಕ್ರಿಕೆಟಿಗ ಹಾಗೂ ಬಿಜೆಪಿ ಸಂಸದ ಗೌತಮ್ ಗಂಭೀರ್ ಒಂದು ಕೋಟಿ ರೂಪಾಯಿ ನಿಧಿ ಸಮರ್ಪಣೆ ಮಾಡಿದ್ದಾರೆ .
‘ಅದ್ಭುತವಾದ ರಾಮ ದೇವಾಲಯ ಎಲ್ಲಾ ಭಾರತೀಯರ ಕನಸಾಗಿದೆ. ದೀರ್ಘಕಾಲದಿಂದ ಇದ್ದ ಸಮಸ್ಯೆ ಅಂತಿಮವಾಗಿ ಬಗೆಹರಿದಿದೆ. ಇದು ದೇಶದಲ್ಲಿ ಏಕತೆ ಮತ್ತು ಶಾಂತಿಗೆ ದಾರಿ ಮಾಡಿಕೊಡಲಿದೆ. ಈ ಪ್ರಯತ್ನಕ್ಕೆ ನನ್ನ ಮತ್ತು ನನ್ನ ಕುಟುಂಬದಿಂದ ಒಂದು ಸಣ್ಣ ಕೊಡುಗೆಯಾಗಿ ಈ ಹಣ ನೀಡುತ್ತಿದ್ದೇನೆ’ ಎಂದು ಗಂಭೀರ್ ಹೇಳಿದ್ದಾರೆ.