ಹೊಸದಿಗಂತ ಆನ್ ಲೈನ್ ಡೆಸ್ಕ್:
ಅಯೋಧ್ಯೆಯಲ್ಲಿ ಶ್ರೀ ರಾಮ ಮಂದಿರ ನಿರ್ಮಾಣಕ್ಕಾಗಿ ಸಾರ್ವಜನಿಕರಿಂದ ನಿಧಿ ಸಂಗ್ರಹಿಸುವ ಅಭಿಯಾನಕ್ಕೆ ದೇಶಾದ್ಯಂತ ಅತ್ಯುತ್ತಮ ಸ್ಪಂದನೆ ದೊರೆತಿದ್ದು, ಕಾಂಗ್ರೆಸ್ ನಾಯಕ ದಿಗ್ವಿಜಯ್ ಸಿಂಗ್ ಕೂಡ ಮಂದಿರ ನಿರ್ಮಾಣಕ್ಕಾಗಿ ಒಂದು ಲಕ್ಷ, 11 ಸಾವಿರದ 111 ರೂಪಾಯಿಗಳನ್ನು ಸಮರ್ಪಣೆ ಮಾಡಿದ್ದಾರೆ.
ಈಗಾಗಲೇ ಪಕ್ಷಾತೀತವಾಗಿ ರಾಜಕೀಯ ನಾಯಕರೂ ರಾಮ ಮಂದಿರ ನಿರ್ಮಾಣಕ್ಕಾಗಿ ನಿಧಿ ನೀಡುತ್ತಿದ್ದಾರೆ.
1,100 ಕೋಟಿ ರೂಪಾಯಿ ಅಂದಾಜು ವೆಚ್ಚದಲ್ಲಿ ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಿಸುವ ಯೋಜನೆ ಹೊಂದಲಾಗಿದೆ.