Monday, August 8, 2022

Latest Posts

ಶ್ರೀ ರಾಮ ಮಂದಿರ ಭೂಮಿ ಪೂಜೆ : ಆ.5 ರಂದು ಕೊಡಗು ಜಿಲ್ಲೆಯಾದ್ಯಂತ ನಿಷೇಧಾಜ್ಞೆ ಜಾರಿ

ಮಡಿಕೇರಿ : ಅಯೋಧ್ಯೆಯಲ್ಲಿ ಆ.5 ರಂದು ರಾಮಮಂದಿರ ನಿರ್ಮಾಣಕ್ಕಾಗಿ ಭೂಮಿ ಪೂಜಾ ಕಾರ್ಯಕ್ರಮ ನಡೆಯಲಿರುವ ಹಿನ್ನೆಲೆಯಲ್ಲಿ ಹಾಗೂ ಕೋವಿಡ್-19 ಸೋಂಕು ಹರಡದಂತೆ ಸರ್ಕಾರದ ಮಾರ್ಗಸೂಚಿಯಂತೆ ಹಲವು ನಿರ್ಬಂಧಗಳನ್ನು ಪಾಲಿಸಬೇಕಿರುವುದರಿಂದ ಆ.5ರಂದು ಕೊಡಗು ಜಿಲ್ಲೆಯಾದ್ಯಂತ ಸೆ.144 ಹಾಗೂ 144ಎ ಅನ್ವಯ ನಿಷೇಧಾಜ್ಞೆ ವಿಧಿಸಿ ಜಿಲ್ಲಾ ದಂಡಾಧಿಕಾರಿಗಳೂ ಆಗಿರುವ ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಆದೇಶಿಸಿದ್ದಾರೆ.
ಈ ನಿಷೇಧಾಜ್ಞೆಯು ಆ.5ರ 24 ಗಂಟೆ ಅವಧಿಯಲ್ಲಿ ಜಾರಿಯಲ್ಲಿರುತ್ತದೆ ಎಂದು ಅವರು ಹೇಳಿದ್ದಾರೆ.
ನಿಷೇಧಿತ ಅವಧಿಯಲ್ಲಿ ಸರ್ಕಾರಿ ಕಾರ್ಯಕ್ರಮ ಮತ್ತು ಪೂರ್ವ ಯೋಜಿತ ನಿಶ್ಚಿತಾರ್ಥ, ಮದುವೆ, ನಾಮಕರಣ, ಗೃಹ ಪ್ರವೇಶ ಮುಂತಾದ ಸಮಾರಂಭಗಳು ಮತ್ತು ಪೂಜಾ ಮಂದಿರ, ಮಸೀದಿಗಳಲ್ಲಿ ನಡೆಯುವ ಪ್ರತಿನಿತ್ಯದ ಪ್ರಾರ್ಥನೆ ಹೊರತುಪಡಿಸಿ, ಉಳಿದಂತೆ ಯಾವುದೇ ಸಭೆ ಸಮಾರಂಭ ಮತ್ತು ಮೆರವಣಿಗೆಯನ್ನು ನಿಷೇಧಿಸಿದೆ.
ಎಲ್ಲಾ ಸಾರ್ವಜನಿಕ/ ರಾಜಕೀಯ ಬಹಿರಂಗ ಸಭೆ-ಸಮಾರಂಭ, ಪ್ರಚೋದನಾಕಾರಿ ಹೇಳಿಕೆ/ ಘೋಷಣೆ, ಕಪ್ಪು ಬಾವುಟ/ ಕಪ್ಪು ಪಟ್ಟಿ ಪ್ರದರ್ಶನ, ಭಾಷಣ, ಮೆರವಣಿಗೆ, ಪ್ರತಿಭಟನೆ, ಜಾಥಾ, ಧರಣಿ, ಮುಷ್ಕರ, ರಸ್ತಾ-ರೋಕೋ, ಮುತ್ತಿಗೆ, ಪಟಾಕಿ ಸಿಡಿಸುವುದು ಹಾಗೂ ಕೋಮು ಭಾವನೆಗಳಿಗೆ ಧಕ್ಕೆಯಾಗುವಂತಹ ಯಾವುದೇ ವಿಜಯೋತ್ಸವ ಮತ್ತು ಕರಾಳ ದಿನ ಆಚರಣೆಯನ್ನು ನಿಷೇಧಿüಸಲಾಗಿದೆ.
ಯಾವುದೇ ಫ್ಲೆಕ್ಸ್, ಬ್ಯಾನರ್, ಬಂಟಿಂಗ್ಸ್, ಕರ ಪತ್ರ, ಭಿತ್ತಿಪತ್ರ ಬಳಸುವುದು, ಅಂಟಿಸುವುದು ಅಥವಾ ಹಂಚುವುದನ್ನು ಸಂಪೂರ್ಣವಾಗಿ ನಿಷೇಧಿಸಿದೆ. ಯಾವುದೇ ರೀತಿಯ ಮತೀಯ ಪ್ರಚೋದನಾತ್ಮಕ ಧ್ವಜ/ ಫಲಕ/ ಬಾವುಟಗಳ ಪ್ರದರ್ಶನ ಮತ್ತು ಬಳಕೆಯನ್ನು ನಿಷೇಧಿಸಿದೆ.
ನಿಷೇದಿsತ ಅವಧಿಯಲ್ಲಿ ಜನರು ಗುಂಪು ಸೇರುವುದನ್ನು ನಿಷೇಧಿಸಿದೆ. ಸರ್ಕಾರಿ ಕರ್ತವ್ಯದ ನಿಮಿತ್ತ ಮತ್ತು ಬ್ಯಾಂಕ್/ ಎಟಿಎಂ ಭದ್ರತಾ ಕಾರ್ಯಕ್ಕಾಗಿ ನಿಯೋಜಿಸಲ್ಪಟ್ಟ ಸಿಬ್ಬಂದಿಗಳನ್ನು ಹೊರತುಪಡಿಸಿ, ಯಾರೇ ಖಾಸಗಿ ವ್ಯಕ್ತಿಗಳು ಯಾವುದೇ ರೀತಿಯ ಆಯುಧ ಹತ್ಯಾರುಗಳನ್ನು ಹೊಂದಿರುವುದು, ಪ್ರದರ್ಶಿಸುವುದು ಅಥವಾ ಹಿಡಿದುಕೊಂಡು ತಿರುಗಾಡುವುದನ್ನು ನಿಷೇಧಿಸಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ಆದೇಶದಲ್ಲಿ ತಿಳಿಸಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss