Saturday, August 13, 2022

Latest Posts

ಸಂಕಷ್ಟದಲ್ಲಿರುವ ರೈತರಿಗೆ ಪರಿಹಾರ ನೀಡಲು ಒತ್ತಾಯಿಸಿ ಪ್ರತಿಭಟನೆ| ಎಸಿ ರೂಮಿಂದ ಗ್ರಾಮೀಣ ಪ್ರದೇಶಕ್ಕೆ ಬನ್ನಿ: ಜಿಲ್ಲಾಧಿಕಾರಿಗೆ ರೈತರ ಆಗ್ರಹ

ಹೊಸದಿಗಂತ ವರದಿ,ಯಾದಗಿರಿ:

ಜಿಲ್ಲೆಯಲ್ಲಿ ರೈತರು ಭೀಮಾ-ಕೃಷ್ಣ ನದಿಗಳ ಪ್ರವಾಹದಿಂದ ಸಂಕಷ್ಟದಲ್ಲಿರುವ ರೈತರಿಗೆ ರಾಜ್ಯ ಸರ್ಕಾರ ಬೆಳೆ ನಷ್ಟಕ್ಕೆ ವೈಜ್ಞಾನಿಕ ಪರಿಹಾರ ನೀಡಬೇಕು ಎಂದು ಆಗ್ರಹಿಸಿ ಅಖಿಲ ಭಾರತ ರೈತ ಸಂಘರ್ಷ ಸಮನ್ವಯ ಸಮಿತಿ ಜಿಲ್ಲಾ ಘಟಕದ ಕಾರ್ಯಕರ್ತರು ನಗರದ ನೇತಾಜಿ ವೃತ್ತದಲ್ಲಿ ಉಗ್ರ ಪ್ರತಿಭಟನೆ ನಡೆಸಿ ಒತ್ತಾಯಿಸಿದರು.

ರೈತ ಸಂಘದ ಕಾರ್ಯಕರ್ತರು ಮಾನವ ಸರಪಳಿ ನಿರ್ಮಾಣ ಮಾಡಿ 1 ಗಂಟೆ ಕಾಲ ರಸ್ತೆ ತಡೆ ನಡೆಸಿ, ಮುಖ್ಯಮಂತ್ರಿಗಳು ವೈಮಾನಿಕ ಪ್ರವಾಸ ಮೂಲಕ ಪ್ರವಾಹ ಹಾನಿ ವೀಕ್ಷಿಸಿದ್ದಾರೆ. ಅವರಿಗೆ ವಾಸ್ತವಿಕ ಹಾನಿ ಹಾಗೂ ಸಮಸ್ಯೆ ತಿಳಿದಿಲ್ಲ, ಇಲ್ಲಿನ ಜಿಲ್ಲಾಧಿಕಾರಿಗಳು ಎಸಿ ಕೊಠಡಿಯಲ್ಲಿ ಕುಳಿತು ಅಧಿಕಾರಿಗಳ ಸಭೆ ನಡೆಸಿದರೆ ಸಾಲದ. ರೈತರ ಸಮಸ್ಯೆ ಅರಿಯಲು ಖುದ್ದು ಗ್ರಾಮೀಣ ಪ್ರದೇಶಗಳಿಗೆ ಬೇಟಿ ನೀಡಬೇಕು ಎಂದು ಒತ್ತಾಯಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ರೈತ ಮುಖಂಡರು ಜಿಲ್ಲೆಯಲ್ಲಿ ಅತವೃಷ್ಟಿ ಹಾಗೂ ಪ್ರವಾಹದಿಂದ ನೂರಾರು ಕುಟುಂಬಗಳ ಮನೆಗಳು ಕಳೆದುಕೊಂಡು ಬೀದಿ ಪಾಲಾಗಿದ್ದರೆ. ಸರ್ಕಾರ ಮನೆ ನಿರ್ಮಾಣ ಮಾಡಿಕೊಡಲು ಮುಂದಾಗುತ್ತಿಲ್ಲ. ಅದಕ್ಕಾಗಿ ಜನಪ್ರತಿನಿಧಿಗಳು ಮತ್ತು ಅದಿಕಾರಿಗಳು ಕೂಡಲೆ ಮನೆ ಕಟ್ಟಿಸಿಕೊಡಲು ಮುಂದಗಬೇಕು ಎಂದು ಒತ್ತಾಯಿಸಿದರು.

ಸರ್ಕಾರ ಕೂಡಲೇ ಎಪಿಎಂಸಿ ಕಾಯ್ದೆ, ಭೂ ಸುಧಾರಣಾ ಕಾಯ್ದೆಯನ್ನು ಸುಗ್ರೀವಾಜ್ಞೆಗಳ ಮೂಲಕ ಹಿಂತೆಗೆದಕೊಳ್ಳಬೇಕು, ಜಿಲ್ಲೆಗೆ ನೆರೆ ರಾಜ್ಯಗಳಿಂದ ಆಗಮಿಸಿರುವ ಭತ್ತ ಕಟಾವು ಯಂತ್ರಗಳ ಮಾಲಿಕರು ಅಗತ್ಯ ಹಣಕಿಂತ ಹೆಚ್ಚಾಗಿ ಬಾಡಿಗೆ ಪಡೆಯುತ್ತಿದ್ದಾರೆ. ಜಿಲ್ಲಾಡಳಿತ ಅದಕ್ಕೆ ಕಡಿವಾಣ ಹಾಕಬೇಕು ಎಂದರು.

ಭತ್ತ ಹಾಗೂ ಹತ್ತಿ ಬೆಳೆಗಳ ಮಾರಾಟಕ್ಕೆ ಸರ್ಕಾರ ಎಲ್ಲಾ ಹೋಬಳಿಗಳಲ್ಲಿ ಖರೀದಿ ಕೇಂದ್ರಗಳನ್ನು ತೆರೆದು ಸೂಕ್ತ ಬೆಂಬಲ ಬೆಲೆ ನೀಡುವ ಜೊತೆಗೆ ಆಲಮಟ್ಟಿ ಮತ್ತು ನಾರಾಯಣಪೂರ ಜಲಾಶಯಗಳಲ್ಲಿ ಸಾಕಷ್ಟು ನೀರು ಸಂಗ್ರಹವಾಗಿರುವುದರಿoದ ಕೂಡಲೇ ನೀರಾವರಿ ಸಲಹಾ ಸಮಿತಿ ಸಭೆ ಕರೆದು ಹಿಂಗಾರು ಬೆಳೆಗಳಿಗೆ ಏಪ್ರಿಲ್ 10ರ ವರೆಗೆ ನೀರು ಒದಗಿಸಬೇಕು ಎಂದು ರೈತ ಮುಖಂಡ ಮಲ್ಲಿಕಾರ್ಜುನ ಸತ್ಯಂಪೇಠ ಆಗ್ರಹಿಸಿದರು.

ಸ್ಥಳಕ್ಕೆ ಆಗಮಿಸಿದ ತಹಸಿಲ್ದಾರ ಚನ್ನಮಲ್ಲಪ್ಪ ಘಂಟಿ ಅವರ ಮೂಲಕ ರೈತ ಮುಖಂಡರು ವಿವಿಧ ಬೇಡಿಕೆಗಳ ಮನವಿ ಪತ್ರವನ್ನು ಮುಖ್ಯಮಂತ್ರಿಗಳಿಗೆ ಸಲ್ಲಿಸಿದರು.

ಪ್ರತಿಭಟನೆಯಲ್ಲಿ ರೈತ ಸಂಘದ ಮುಖಂಡರಾದ ಮಲ್ಲಿಕಾರ್ಜುನ ಸತ್ಯಂಪೇಟ್, ಚನ್ನಪ್ಪ ಆನೆಗುಂದಿ, ಎಸ್.ಎಂ ಸಾಗರ್, ಹಣಮಂತ ಕೊಂಗAಡಿ, ದಾವಲಸಾಬ್ ನದಾಫ್, ಚಂದ್ರಕಲಾ ವಡಿಗೇರಿ, ಗಣೇಶ ಅನವಾರ, ಶಿವರಾಜ, ಭೀಮರಾಯ ಯಡ್ಡಳ್ಳಿ, ಪಕೀರ್ ಅಹ್ಮದ್, ಚಂದ್ರಶೇಖರ ಚವ್ಹಾಣ ಸೇರಿದಂತೆ ನೂರಾರು ಕಾರ್ಯಕರ್ತರು ಉಪಸ್ಥಿತರಿದ್ದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss