ಹೊಸ ದಿಗಂತ ಆನ್ ಡೆಸ್ಕ್:
ಕೊರೋನಾ ಸೋಂಕಿನ ಭೀತಿಯಿಂದ ಕಳೆದ ೯ ತಿಂಗಳಿನಿಂದ ಬಂದ್ ಆಗಿದ್ದ ಶಾಲಾ ಕಾಲೇಜುಗಳು ಹಂತ ಹಂತವಾಗಿ ತೆರೆಯುತ್ತಿದ್ದು , ಈಗಾಗಲೇ 10 ಹಾಗೂ 12 ನೇ ತರಗತಿ ಜೊತೆಗೆ ವಿದ್ಯಾಗಮ ಯೋಜನೆ ಸಹ ಆರಂಭಗೊಂಡಿದೆ.
ಇನ್ನು ರಾಜ್ಯ ಸರಕಾರ ಇದೀಗ ಮತ್ತೊಂದು ಮಹತ್ವದ ತೀರ್ಮಾನ ಕೈಗೊಂಡಿದ್ದು, ಸಂಕ್ರಾಂತಿ ನಂತರ ಮೊದಲ, ದ್ವಿತೀಯ ವರ್ಷದ ಪದವಿ, ಸ್ನಾತಕೋತ್ತರ, ಡಿಪ್ಲೊಮೋ, ಎಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಆಫ್ ಲೈನ್ ತರಗತಿ ನಡೆಸಲು ತೀರ್ಮಾನಿಸಲಾಗಿದೆ.
ಬೆಂಗಳೂರಿನಲ್ಲಿ ಶುಕ್ರವಾರ ಸರಕಾರಿ – ಖಾಸಗಿ ವಲಯದ ಎಲ್ಲ ವಿಶ್ವವಿದ್ಯಾಲಯಗಳ ಕುಲಪತಿಗಳು, ಉನ್ನತ ಶಿಕ್ಷಣ ಸೇರಿ ಸಂಬಂಧಿತ ಎಲ್ಲ ಇಲಾಖೆಗಳ ಅಧಿಕಾರಿಗಳ ಜತೆ ವಿಡಿಯೋ ಸಂವಾದ ನಡೆಸಿದ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಈ ಕುರಿತು ಮಾಹಿತಿ ನೀಡಿದರು.
ಈಗಾಗಲೇ ಪದವಿ, ಸ್ನಾತಕೋತ್ತರ, ಡಿಪ್ಲೊಮಾ ಮತ್ತು ಇಂಜಿನಿಯರಿಂಗ್ ವಿಭಾಗದ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಆಫ್ಲೈನ್ ತರಗತಿ ನಡೆಯುತ್ತಿದೆ.