Saturday, August 13, 2022

Latest Posts

ಸಂಗೊಳ್ಳಿ ರಾಯಣ್ಣ ಮೂರ್ತಿ ಪ್ರತಿಷ್ಠಾಪನೆಗೆ ವಿರೋಧಿಸುವವರು ದೇಶದ್ರೋಹಿಗಳು : ಕರವೇ ಜಿಲ್ಲಾಧ್ಯಕ್ಷ

ಬೆಳಗಾವಿ: ಸಂಗೊಳ್ಳಿ ರಾಯಣ್ಣ ಮೂರ್ತಿ ಪ್ರತಿಷ್ಠಾಪನೆ ಮಾಡಿರುವುದಕ್ಕೆ ವಿರೋಧ ವ್ಯಕ್ತಪಡಿಸುತ್ತಿರುವರು ದೇಶ ದ್ರೋಹಿಗಳೆಂದು ಕರವೇ ಜಿಲ್ಲಾಧ್ಯಕ್ಷ ದೀಪಕ ಗುಡಗನಟ್ಟಿ ಹೇಳಿದರು.
ಅವರು ಶುಕ್ರವಾರ ನಗರದ ಚನ್ನಮ್ಮ ವೃತ್ತದಲ್ಲಿ ಪೀರನವಾಡಿಯಲ್ಲಿ ಸಂಗೊಳ್ಳಿ ರಾಯಣ್ಣನ ಮೂರ್ತಿ ಪ್ರತಿಷ್ಠಾಪನೆಯ ಹಿನ್ನೆಲೆಯಲ್ಲಿ ಪಟಾಕಿ ಸಿಡಿಸಿ ಸಿಹಿ ಹಂಚಿ ಸಂಭ್ರಮಿಸಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದರು. ಪೀರನವಾಡಿಯಲ್ಲಿ ವೀರ ಶೂರ ಸಂಗೊಳ್ಳಿ ರಾಯಣ್ಣನ ಮೂರ್ತಿ ಪ್ರತಿಷ್ಠಾಪನೆ ಮಾಡಬೇಕೆಂದು ಕನ್ನಡಿಗರ ಬಹುವರ್ಷಗಳ ಬೇಡಿಕೆಯಾಗಿತ್ತು. ಅದು ಈಗ ಸಾಕಾರಗೊಂಡಿದೆ ಎಂದರು.
ಸರ್ಕಾರದಿಂದ ಶಿವಾಜಿ‌ ಜಯಂತಿ ಆಚರಿಸಲಾಗುತ್ತದೆ. ಆ ಸಮಯದಲ್ಲಿ ಕನ್ನಡಿಗರೂ, ಕನ್ನಡ ಸಂಘಟನೆಗಳು ಯಾವುದೇ ರೀತಿಯ ವಿರೋಧ ಮಾಡುವುದಿಲ್ಲ. ಸ್ವಾತಂತ್ರ್ಯಕ್ಕಾಗಿ ಬ್ರಿಟಿಷ್ ರ ವಿರುದ್ದ ಹೋರಾಡಿದ ವೀರ, ಶೂರ ಸಂಗೊಳ್ಳಿ ರಾಯಣ್ಣನ ಮೂರ್ತಿ ಪ್ರತಿಷ್ಠಾಪನೆಗೆ ವಿರೋಧ ಮಾಡುವವರು ದೇಶದ್ರೋಹಿಗಳು ಎಂದು ಆಕ್ರೋಶ ವ್ಯಕ್ತಪಡಿಸಿದರು.
ಮಹಾದೇವ ತಳವಾರ, ಅಶೋಕ ಚಂದರಗಿ ಸೇರಿದಂತೆ ನೂರಾರು ಕರವೇ ಕಾರ್ಯಕರ್ತರು ಸಂಭ್ರಮಾಚರಣೆಯಲ್ಲಿ ಭಾಗವಹಿಸಿದ್ದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss