ಮಂಗಳೂರು: ಬೆಂಗಳೂರಿನಲ್ಲಿ ಸಂಚಾರ ನಿಯಮ ಉಲ್ಲಂಘನೆ ದಿನದಿಂದ ದಿನಕ್ಕೆ ಹೆಚ್ಚುತ್ತಿತ್ತು. ಇದೀಗ ಬೆಂಗಳೂರು ಪೊಲೀಸರು ಸಂಚಾರ ನಿಯಮ ಉಲ್ಲಂಘಿಸವವರಿಂದ ದಂಡ ವಸೂಲಿ ಮಾಡುತ್ತಿದ್ದು, ಒಂದೇ ವಾರದಲ್ಲಿ ಬರೋಬ್ಬರಿ 4.44 ಕೋಟಿ ರೂ. ದಂಡ ಸಂಗ್ರಹಿಸಿದ್ದಾರೆ.
ಜಂಟಿ ಕಮಿಷನರ್ (ಸಂಚಾರ) ಬಿ.ಆರ್. ರವಿಕಾಂತೇಗೌಡ ನೀಡಿರುವ ಮಾಹಿತಿಯಂತೆ ಅಕ್ಟೋಬರ್ 11 ರಿಂದ ಅ.17 ರವರೆಗೆ ವಿಶೇಷ ಕಾರ್ಯಾಚರಣೆ ನಡೆಸಿದ ಪೊಲೀಸರು, ಸಂಚಾರ ನಿಯಮ ಉಲ್ಲಂಘಿಸಿದಕ್ಕಾಗಿ 1.06 ಲಕ್ಷ ಪ್ರಕರಣ ದಾಖಲಿಸಿಕೊಂಡಿದ್ದು, 4.44 ಕೋಟಿ ರೂ. ದಂಡ ಸಂಗ್ರಹಿಸಿದ್ದಾರೆ.
ಸಂಚಾರ ನಿಯಮ ಉಲ್ಲಂಘನೆ ಕಡಿಮೆ ಮಾಡಲು ಈ ಕ್ರಮ ಕೈಗೊಳ್ಳಲಾಗಿರುವುದಾಗಿಯೂ ಅವರು ಹೇಳಿದರು.