Thursday, June 30, 2022

Latest Posts

ಸಂಪುಟ ಪುನಾರಚನೆ ಸರ್ಕಸ್’ನಲ್ಲಿ ರಾಜ್ಯದ ಆಡಳಿತ ದಿಕ್ಕೆಟ್ಟು ಹೋಗಿದೆ: ಸಿದ್ದರಾಮಯ್ಯ ಆರೋಪ

ಹೊಸ ದಿಗಂತ ಆನ್ ಲೈನ್ ಡೆಸ್ಕ್:

ಸಂಪುಟ ವಿಸ್ತರಣೆಯೋ, ಪುನಾರಚನೆಯೋ, ನಾಯಕತ್ವ ಬದಲಾವಣೆಯೋ ಇವೆಲ್ಲಾ ನಿಮ್ಮ ಪಕ್ಷದ ಹಣೆಬರಹ ಈ ಸರ್ಕಸ್ ನಲ್ಲಿ ರಾಜ್ಯದ ಆಡಳಿತ ದಿಕ್ಕೆಟ್ಟು ಹೋಗಿದೆ ಎಂದು ರಾಜ್ಯ ಸರ್ಕಾರದ ವಿರುದ್ಧ ಮಾಜಿ ಸಿಎಂ ಸಿದ್ದರಾಮಯ್ಯ ಆರೋಪಿಸಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಅವರು ಸಂಪುಟ ವಿಸ್ತರಣೆಯೋ, ಪುನಾರಚನೆಯೋ ಅಥವಾ ಬದಲಾವಣೆಯೋ ಇವೆಲ್ಲ ನಿಮ್ಮ ಪಕ್ಷದ ಹಣೆಬರಹ. ಈ ಸರ್ಕಸ್ ನಲ್ಲಿ ರಾಜ್ಯದ ಆಡಳಿತ ದಿಕ್ಕೆಟ್ಟು ಹೋಗಿದೆ. ಶೀಘ್ರವಾಗಿ ಏನಾದರೂ ನಿರ್ಧಾರ ಕೈಗೊಂಡು ಈಗಿನ ಬಿಕ್ಕಟ್ಟು ಕೊನೆಗೊಳಿಸಿ, ಆಡಳಿತದ ಕಡೆ ಗಮನಕೊಟ್ಟು ರಾಜ್ಯವನ್ನು ಉಳಿಸಿ ಎಂದು ಅವರು ಹೇಳಿದ್ದಾರೆ.

ಹಿಂದೆಲ್ಲ ರಾಜ್ಯ ಬಿಜೆಪಿ ನಾಯಕರು ‘ಹೈಕಮಾಂಡ್ ಸಂಸ್ಕೃತಿ’ ಮೂಲನಿವಾಸಿಗಳು-ವಲಸೆಗಾರರು’ ‘ಕುಟುಂಬ ರಾಜಕಾರಣ’ ಎಂಬೀತ್ಯಾದಿ ಪದಗಳನ್ನು ಜೋಡಿಸಿ ಹಗಲು ರಾತ್ರಿ ನಮ್ಮ ವಿರುದ್ಧ ಟೀಕೆ ಮಾಡುತ್ತಿದ್ದರು. ಈಗ ಅದೇ ಆರೋಪಗಳನ್ನು ಪರಸ್ಪರ ಮಾಡ್ಕೊಂಡು ಬತ್ತಲಾಗುತ್ತಿದ್ದಾರೆ ಎಂದು ಸಿದ್ದರಾಮಯ್ಯ ಟೀಕಿಸಿದರು.

 

 

 

 

 

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss