Friday, July 1, 2022

Latest Posts

ಸಂಪುಟ ವಿಸ್ತರಣೆ, ಉಪಸಮಿತಿ ರಚನೆ ಸಿಎಂನ ಪರಮಾಧಿಕಾರ: ಸಚಿವ ಜಗದೀಶ ಶೆಟ್ಟರ್

ಹೊಸ ದಿಗಂತ ವರದಿ, ಧಾರವಾಡ:

ರಾಜ್ಯ ಸಚಿವ ಸಂಪುಟ ವಿಸ್ತರಣೆ ಹಾಗೂ ಸಚಿವ ಸಂಪುಟದ ಉಪಸಮಿತಿ ರಚನೆಗೆ ಸಂಬoಧಿಸಿದoತೆ ಮುಖ್ಯಮಂತ್ರಿಗಳಾದ ಬಿ.ಎಸ್. ಯಡಿಯೂರಪ್ಪ ಅವರಿಗೆ ಪರಮಾಧಿಕಾರಿವಿದೆ ಎಂದು ಬೃಹತ್-ಮಧ್ಯಮ ಕೈಗಾರಿಕೆ ಸಚಿವ ಜಗದೀಶ ಶೆಟ್ಟರ್ ಹೇಳಿದರು.
ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಂಪುಟ ವಿಸ್ತರಣೆ ಬಗ್ಗೆ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಕೇಂದ್ರದ ವರಿಷ್ಠರನ್ನು ಭೇಟಿಯಾಗಿದ್ದು, ವರಿಷ್ಠರಿಂದ ಗ್ರೀನ್ ಸಿಗ್ನಲ್ ಸಿಕ್ಕ ನಂತರವೇ ಸಂಪುಟ ವಿಸ್ತರಣೆಯಾಗಲಿದೆ ಎಂದು ಸ್ಪಷ್ಟನೆ ನೀಡಿದರು.
ಪಕ್ಷದಲ್ಲಿ ಯಾರಿಗೂ ಅನ್ಯಾಯ ಆಗುವುದಿಲ್ಲ. ನಮ್ಮಲ್ಲಿ ವರಿಷ್ಠರ ಪರಂಪರೆ ಮೊದಲಿನಿಂದಲೂ ಇದೆ. ಅವರ ಅಣತಿ ಹಾಗೂ ಮಾರ್ಗದರ್ಶನದಲ್ಲಿ ಎಲ್ಲವೂ ನಡೆಯಲಿದೆ. ಇಷ್ಟನ್ನು ಬಿಟ್ಟು ಏನು ಹೇಳುವುದಿಲ್ಲ ಎಂದು ಮಾಧ್ಯಮದವರು ಕೇಳಿದ ಪ್ರಶ್ನೆಗೆ ಉತ್ತರಿಸಿದರು.
ಜಲಧಾರೆ ಜಾರಿಗೆ:
ರಾಜ್ಯದಲ್ಲಿ ಜಲಧಾರೆ ಯೋಜನೆ ಅನುಷ್ಠಾನಕ್ಕೆ ತರುತ್ತಿದೆ. ಸಚಿವರಾದ ಕೆ.ಎಸ್.ಈಶ್ವರಪ್ಪ ನೇತೃತ್ವದಲ್ಲಿ ಸದ್ಯ ಮರ‍್ನಾಲ್ಕು ಸಭೆ ನಡೆಸಿದೆ. ಡಿಪಿಆರ್ ಪೂರ್ಣಗೊಂಡಿದ್ದು, ಶೀಘ್ರವೇ ಜಲಧಾರೆ ಯೋಜನೆ ಜಾರಿಗೆ ಬರಲಿದೆ. ಈ ಬಗ್ಗೆ ಯಾವುದೇ ಸಂಶಯ ಬೇಡ ಎಂದು ತಿಳಿಸಿದರು.
ಇನ್ನೂ ಜಿಲ್ಲೆಯಲ್ಲಿ ವ್ಯರ್ಥವಾಗಿ ಹರಿಯುವ ಬೆಣ್ಣೆಹಳ್ಳ-ತುಪ್ಪರಿಹಳ್ಳದ ಬಗ್ಗೆಯೂ ಗ್ರಾಮೀಣ ಶಾಸಕ ಅಮೃತ ದೇಸಾಯಿ ಅವರ ವಿಶೇಷ ಆಸಕ್ತಿ ಮೇರೆಗೆ ಯೋಜನಾ ವರದಿ ಅಂತಿಮ ಹಂತದಲಿದ್ದು, ಶೀಘ್ರವೇ ಏತ ನೀರಾವರಿ ಆರಂಭಿಸಲಿದೆ ಎಂದು ತಿಳಿಸಿದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss