ಹೊಸ ದಿಗಂತ ಆನ್ ಲೈನ್ ಡೆಸ್ಕ್:
ಸಿಎಂ ಯಡಿಯೂರಪ್ಪ ಅವರು ಸಾಕಷ್ಟು ಕಸರತ್ತುಗಳನ್ನು ನಡೆಸುತ್ತಲೇ ಇದ್ದರೂ ಸಚಿವ ಸಂಪುಟ ವಿಸ್ತರಣೆಗೆ ಬಿಜೆಪಿ ಹೈಕಮಾಂಡ್ ಒಪ್ಪಿಗೆ ಸಿಗದ ಕಾರಣ ಅದು ಸಾಧ್ಯವಾಗುತ್ತಿಲ್ಲ. ಹೀಗಾಗಿ ಅಸಮಾಧಾನಗೊಂಡಿರುವ ಶಾಸಕರಿಗೆ ಸಿಎಂ ಅವರು ಬಂಪರ್ ಗಿಫ್ಟ್ ನೀಡಿದ್ದಾರೆ.
ಸಂಪುಟ ಸಭೆಯಲ್ಲಿ ಯಾವುದೇ ಸ್ಥಾನಮಾನ ಲಭ್ಯವಾಗದ ಬಿಜೆಪಿ ಶಾಸಕರನ್ನು ಗುರುತಿಸುವ ಸಲುವಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯುರಪ್ಪ ಅವರು 13 ಶಾಸಕರನ್ನು ರಾಜ್ಯ ಆಡಳಿತ ಮಂಡಳಿಗಳು ಮತ್ತು ನಿಗಮಗಳಿಗೆ ಅಧ್ಯಕ್ಷರನ್ನಾಗಿ ನೇಮಿಸಿದ್ದಾರೆ. ಅಲ್ಲದೇ ನಾಲ್ವರಿಗೆ ರಾಜ್ಯ ದರ್ಜೆಯ ಸ್ಥಾನಮಾನವನ್ನು ನೀಡಲಾಗಿದೆ.
ಸಿಎಂ ಅವರ ಮಾಧ್ಯಮ ಸಲಹೆಗಾರರನ್ನಾಗಿ 14 ನೇ ನೇಮಕಾತಿಯಾಗಿ ನಿವೃತ್ತ ಮಾಹಿತಿ ವಿಭಾಗದ ಅಧಿಕಾರಿಯೊಬ್ಬರನ್ನು ನೇಮಕ ಮಾಡಲಾಗಿದೆ. ಕ್ಯಾಬಿನೆಟ್ ಶ್ರೇಣಿಯೊಂದಿಗೆ ಇತರ ನಾಲ್ವರು ಶಾಸಕರನ್ನು ಇತರ ಮಂಡಳಿಗಳು ಮತ್ತು ನಿಗಮಗಳಿಗೆ ನೇಮಕ ಮಾಡಲಾಗಿದೆ. ಈ ಶ್ರೇಣಿಯು ಕ್ಯಾಬಿನೆಟ್ ಮಂತ್ರಿಯ ಸ್ಥಾನಕ್ಕೆ ಸಮನಾಗಿರುತ್ತದೆ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.