Friday, August 19, 2022

Latest Posts

ಸಂಭಾವ್ಯರ ಪಟ್ಟಿಯಲ್ಲಿ ಹೆಸರಿಲ್ಲದಿದ್ದರೂ ಬಿಎಸ್ ವೈ ಮನಸ್ಸಿನಲ್ಲಿದ್ದೇನೆ: ಹೊಳಲ್ಕೆರೆ ಶಾಸಕ ಚಂದ್ರಪ್ಪ ಪ್ರತಿಕ್ರಿಯೆ

ದಾವಣಗೆರೆ: ಸಚಿವನಾಗಬೇಕಿದ್ದ ನಾನು ನಿಗಮ-ಮಂಡಳಿ ಅಧ್ಯಕ್ಷನಾಗಿದ್ದೇನೆ. ಈಗಲೂ ಸಚಿವ ಸಂಪುಟ ವಿಸ್ತರಣೆಯಲ್ಲಿ ನನಗೆ ಸ್ಥಾನ ಸಿಗುತ್ತದೋ, ಇಲ್ಲವೋ ಗೊತ್ತಿಲ್ಲ. ಲಿಸ್ಟ್ ನಲ್ಲಿ ನನ್ನ ಹೆಸರು ಇಲ್ಲದಿದ್ದರೂ ಸಿಎಂ ಯಡಿಯೂರಪ್ಪನವರ ಮನಸ್ಸಿನಲ್ಲಿದ್ದೇನೆ ಎಂದು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಅಧ್ಯಕ್ಷ, ಹೊಳಲ್ಕೆರೆ ಶಾಸಕ ಚಂದ್ರಪ್ಪ ಹೇಳಿದ್ದಾರೆ.
ನಗರದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಡಿಯೂರಪ್ಪನವರು ಬಿಜೆಪಿ ಬಿಟ್ಟು ಕೆಜೆಪಿ ಪಕ್ಷ ಕಟ್ಟಲು ಮುಂದಾದಾಗ 6 ತಿಂಗಳ ಮೊದಲೇ ನಾನು ರಾಜೀನಾಮೆ ನೀಡಿದ್ದೆ. ಆಗ ಯಾವ ಸಚಿವರು, ಶಾಸಕರು ಸಹ ಇನ್ನೂ ರಾಜೀನಾಮೆ ನೀಡಿರಲಿಲ್ಲ. ಮೊದಲಿನಿಂದಲೂ ನಾನು ಯಡಿಯೂರಪ್ಪ ಮಾತಿಗೆ ಬದ್ಧನಾಗಿ ನಡೆದುಕೊಂಡಿದ್ದು, ಈಗಲೂ ಇನ್ನು ಮುಂದೆಯೂ ನಿಷ್ಠನಾಗಿರುತ್ತೇನೆ ಎಂದರು.
ಮುಂದಿನ ಮೂರು ವರ್ಷಗಳ ಕಾಲ ಯಡಿಯೂರಪ್ಪನವರೇ ರಾಜ್ಯದ ಮುಖ್ಯಮಂತ್ರಿಯಾಗಿದ್ದು, ನಾಯಕತ್ವ ಬದಲಾವಣೆ ಪ್ರಶ್ನೆಯೇ ಇಲ್ಲ. ಈ ಹಿಂದೆ ಸಿದ್ದರಾಮಯ್ಯ ಸಿಎಂ ಆಗಿದ್ದಾಗ ಮುಖ್ಯಮಂತ್ರಿ ಖುರ್ಚಿ ಖಾಲಿ ಇಲ್ಲ ಎಂದಿದ್ದರು. ಈಗಲೂ ಅದನ್ನೇ ಹೇಳಬೇಕಷ್ಟೇ. ಪ್ರತಿಯೊಬ್ಬ ಶಾಸಕನಿಗೆ ಸಚಿವನಾಗಬೇಕು, ಸಚಿವರಿಗೆ ಸಿಎಂ ಆಗಬೇಕೆಂಬ ಆಸೆ ಇರುವುದರಲ್ಲಿ ತಪ್ಪೇನಿಲ್ಲ. ಏನೇ ಆದರೂ ಸಚಿವ ಸಂಪುಟ ವಿಸ್ತರಣೆ ನಂತರ ಬಿಜೆಪಿಯಲ್ಲಿ ಭಿನ್ನಮತ ಸ್ಫೋಟಿಸಲ್ಲ. ಯಡಿಯೂರಪ್ಪರ ನಾಯಕತ್ವ ಬದಲಾವಣೆ ವಿಚಾರ ಕೇವಲ ಊಹಾಪೋಹ ಎಂದು ಅವರು ಸ್ಪಷ್ಟಪಡಿಸಿದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss

error: Content is protected !!