Wednesday, August 17, 2022

Latest Posts

ಸಕಾಲ ಯೋಜನೆಗೆ ತಳವಾರ, ಪರಿವಾರನ್ನು ರಾಜ್ಯ ಸರ್ಕಾರ ಸೇರಿಸಬೇಕು: ಸಂಸದ ಪ್ರತಾಪ್ ಸಿಂಹ ಒತ್ತಾಯ

ಮೈಸೂರು: ನಾಯಕ ಜನಾಂಗದ ತಳವಾರ ಹಾಗೂ ಪರಿವಾರವನ್ನು ರಾಜ್ಯ ಸರ್ಕಾರ ಸಕಾಲ ಯೋಜನೆಳಲ್ಲಿ ಪರಿಶಿಷ್ಟ ಪಂಗಡಕ್ಕೆ ಸೇರಿಸುವ ಮೂಲಕ ಈ ಎರಡು ಸಮುದಾಯಗಳಿಗೆ ಸರ್ಕಾರದ ಸೌಲಭ್ಯಗಳು ಸಿಗುವಂತೆ ಕ್ರಮ ಕೈಗೊಳ್ಳಬೇಕೆಂದು ಮೈಸೂರು-ಕೊಡಗು ಕ್ಷೇತ್ರದ ಬಿಜೆಪಿ ಸಂಸದ ಪ್ರತಾಪ್‌ಸಿಂಹ ಆಗ್ರಹಿಸಿದ್ದಾರೆ.

ತಳವಾರ ಮತ್ತು ಪರಿವಾರ ಸಮುದಾಯಗಳನ್ನು ಪರಿಶಿಷ್ಟ ಪಂಗಡಕ್ಕೆ ಕೇಂದ್ರ ಸರ್ಕಾರ ಸೇರಿಸಿದ್ದರೂ, ರಾಜ್ಯ ಸರ್ಕಾರ ಈ ಎರಡು ಸಮುದಾಯಗಳನ್ನು ಸೇರ್ಪಡೆ ಮಾಡದ ಹಿನ್ನಲೆಯಲ್ಲಿ ಸಕಾಲ ಯೋಜನೆಗಳಿಂದ ವಂಚಿತವಾಗುತ್ತಿವೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ರಾಜ್ಯ ಸಭೆ ಹಾಗೂ ಲೋಕಸಭೆ, ಎರಡೂ ಸದನಳಲ್ಲಿ ತಳವಾರ, ಪರಿವಾರ ಸಮುದಾಯಗಳನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸುವ ಮಸೂದೆಗೆ ಅಂಗೀಕಾರ ನೀಡಿ, ಗೆಜೆಟ್ ಅಧಿಸೂಚನೆಯನ್ನು ಹೊರಡಿಸಿದೆ. ಈ ಸಮುದಾಯಗಳು ಪರಿಶಿಷ್ಟ ಪಂಗಡಕ್ಕೆ ಸಿಗುವ ಎಲ್ಲಾ ಸವಲತ್ತುಗಳನ್ನು ಪಡೆಯಲು ಅರ್ಹವಾಗಿವೆ. ಆದರೆ ಕರ್ನಾಟಕ ರಾಜ್ಯ ಸರ್ಕಾರ ಸಕಾಲ ಯೋಜನೆಗಳಲ್ಲಿ ತಳವಾರ ಮತ್ತು ಪರಿವಾರ ಸಮುದಾಯಗಳನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸದ ಕಾರಣ, ಸವಲತ್ತುಗಳಿಂದ ವಂಚಿತವಾಗುತ್ತಿವೆ ಎಂದು ಹೇಳಿದ್ದಾರೆ.

೨೦೨೦-೨೧ ನೇ ಶೈಕ್ಷಣಿಕ ವರ್ಷವು ಆರಂಭವಾಗಿದ್ದು, ಮಕ್ಕಳ ಶಾಲಾ ಪ್ರವೇಶಾತಿಗೆ ಹಾಗೂ ಇತರೆ ವಲಯಗಳಲ್ಲಿ ಸರ್ಕಾರದ ಸವಲತ್ತುಗಳನ್ನು ಪಡೆಯಲು ಜಾತಿ ಪ್ರಮಾಣ ಪತ್ರವನ್ನು ಸಲ್ಲಿಸುವುದು ಅತ್ಯವಶ್ಯವಾಗಿರುತ್ತದೆ. ಆದ್ದರಿಂದ ಕೂಡಲೇ ರಾಜ್ಯ ಸರ್ಕಾರ ಸಕಾಲ ಯೋಜನೆಗಳಲ್ಲಿ ತಳವಾರ ಮತ್ತು ಪರಿವಾರವನ್ನು ಪರಿಶಿಷ್ಟಪಂಗಡಕ್ಕೆ ಸೇರ್ಪಡಿಸುವ ಮೂಲಕ ಸಮುದಾಯಗಳಿಗೆ ಸಿಗಬೇಕಾದ ಸವಲತ್ತುಗಳನ್ನು ಒದಗಿಸಲಿ ಎಂದು ಪತ್ರಿಕಾ ಹೇಳಿಕೆಯಲ್ಲಿ ಒತ್ತಾಯಿಸಿದ್ದಾರೆ.

ಇಂದು ಮೈಸೂರಿಗೆ ನೀರು ಸರಬರಾಜಿನಲ್ಲಿ ವ್ಯತ್ಯಯ: ಮೈಸೂರು ನಗರಕ್ಕೆ ನೀರು ಸರಬರಾಜು ಮಾಡುವ ಬೆಳಗೊಳ ಯಂತ್ರಾಗಾರದಲ್ಲಿ ಮೇ ೧೯ ಮತ್ತು ೨೦ ರಂದು ಬಿರುಸಿನ ಮಳೆಯಾದ ಕಾರಣ, ನೀರುನ್ನು ಪಂಪ್ ಮಾಡುವ ಯಂತ್ರಾಗಾರಗಳ ವಿದ್ಯುತ್ ಕಂಬಗಳು ಧರೆಗೆ ಉರುಳಿ ಹಾನಿಯನ್ನುಂಟು ಮಾಡಿವೆ. ಇದರಿಂದಾಗಿ ಮೇ ೨೪ ರಂದು ಮೈಸೂರಿನ ನೀರು ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ.

ಮೈಸೂರಿನ ಮಂಡಿಮೊಹೊಲ್ಲಾ, ಲಷ್ಕರ್‌ಮೊಹಲ್ಲಾ, ಯಾದವಗಿರಿ, ಬನ್ನಿಮಂಟಪ, ಎ.ಬಿ.ಸಿ.ಲೇಔಟ್, ಈರನಗರೆ, ಸಿದ್ದಖಿನಗರ, ಶಿವರಾತ್ರೀಶ್ವರನಗರ, ತಿಲಕ್ ನಗರ, ಬಡೇಮಕಾನ್, ಹಲೀಂನಗರ, ದೇವರಾಜ ಮೊಹೊಲ್ಲಾ ಭಾಗಶ:, ನಜರ್‌ಬಾದ್ ಮೊಹಲ್ಲಾ, ವಿದ್ಯಾರಣ್ಯಪುರಂ, ವಿಶ್ವೇಶ್ವರನಗರ, ಚಾಮುಂಡಿಪುರA, ದೇವರಾಜ ಮೊಹಲ್ಲಾ, ಲೂರ್ದ್ನಗರ, ಮೀನಾಬಜಾರ್, ನಗರಪಾಲಿಕೆಯ ವಾರ್ಡ್ ಸಂಖ್ಯೆ ೮, ೧೭, ೧೮, ೧೯, ೨೩ ರಿಂದ ೨೭ ರವರಗೆ, ೪೦, ೪೧, ೫೫, ೬೦, ೬೧, ೬೨ ಹಾಗೂ ಮೇಟಗಳ್ಳಿ ಮತ್ತು ಹೆಬ್ಬಾಳ ಕೈಗಾರಿಕಾ ಪ್ರದೇಶಗಳಲ್ಲಿ ನೀರು ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ ಎಂದು ವಾಣಿವಿಲಾಸ ನೀರು ಸರಬರಾಜು ವಿಭಾಗದ ಕಾರ್ಯಪಾಲಕ ಅಭಿಯಂತರು ತಿಳಿಸಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss

error: Content is protected !!