Wednesday, August 17, 2022

Latest Posts

ಸಚಿವರಿಂದ ಲೈಂಗಿಕ ದೌರ್ಜನ್ಯ: ಪೊಲೀಸರಿಗೆ ದೂರು ಕೊಟ್ಟ ಗಾಯಕಿ

ಹೊಸ ದಿಗಂತ ಆನ್ ಲೈನ್ ಡೆಸ್ಕ್:

ಮಹಾರಾಷ್ಟ್ರ ರಾಜ್ಯ ಸಚಿವ ಧನುಂಜಯ ಮುಂಡೆ ತನ್ನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಗಾಯಕಿ ರೇಣು ಶರ್ಮಾ ಪೊಲೀಸರಿಗೆ ದೂರು ನೀಡಿದ್ದಾರೆ. ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿಯೂ ಬರೆದುಕೊಂಡಿದ್ದಾರೆ.

ಪೊಲೀಸ್ ಆಯುಕ್ತ ಪರಂ ಭೀರ್ ಸಿಂಗ್ ಅವರಿಗೆ ಬರೆದಿರುವ ಪತ್ರದಲ್ಲಿ ಧನುಂಜಯ ಮುಂಡೆ ತಮಗೆ ಲೈಂಗಿಕ ಕಿರುಕುಳ ನೀಡುತ್ತಿದ್ದಾರೆ. ಅವರ ವಿರುದ್ಧ ಕೂಡಲೇ ಕ್ರಮ ಕೈಗೊಳ್ಳಬೇಕೆಂದು ರೇಣು ಶರ್ಮಾ ಒತ್ತಾಯಿಸಿದ್ದಾರೆ.

ಜನವರಿ 10 ರಂದು ಪೊಲೀಸ್ ಠಾಣೆಗೆ ತೆರಳಿ ದೂರು ನೀಡಿದ್ದು, ಈವರೆಗೆ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಗಾಯಕಿ ಆರೋಪಿಸಿದ್ದಾರೆ. ಆಕೆ ನೀಡಿರುವ ದೂರನ್ನು ಟ್ವಿಟರ್ ಮೂಲಕ ಹಂಚಿಕೊಂಡಿದ್ದಾರೆ.

ಸಚಿವ ಧನುಂಜಯ ಮುಂಡೆ ಲೈಂಗಿಕ ಕಿರುಕುಳ ನೀಡಿದ ಬಗ್ಗೆ ರೇಣು ಶರ್ಮಾ ಅವರು ಒಶಿವೊರಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ತನ್ನ ಪ್ರಾಣಕ್ಕೆ ಅಪಾಯವಿದೆ,  ರಕ್ಷಣೆ ಮಾಡುವಂತೆ ಪ್ರಧಾನಿ ನರೇಂದ್ರ ಮೋದಿ ಮತ್ತು ಮಹಾರಾಷ್ಟ್ರ ಮಾಜಿ ಮುಖ್ಯಮಂತ್ರಿ ಫಡ್ನವೀಸ್ ಅವರನ್ನು ಕೋರಿದ್ದಾರೆ.

ಈ ದೂರಿನಲ್ಲಿ  ಯಾವ ಆಧಾರವಿಲ್ಲ. ಇದೆಲ್ಲಾ ನನ್ನನ್ನು ಬ್ಲಾಕ್ ಮೇಲ್ ಮಾಡಲು ಮಾಡಿರುವ ತಂತ್ರ ಎಂದು ಮುಂಡೆ ಹೇಳಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss

error: Content is protected !!