ಬಳ್ಳಾರಿ: ಆರೋಗ್ಯ ಇಲಾಖೆ ಖಾತೆ ಸಚಿವ ಬಿ.ಶ್ರೀರಾಮುಲು ಅವರ ತಾಯಿ ಹೊನ್ನೂರಮ್ಮ (95) ಅವರು ನಿಧನ ಹಿನ್ನೆಲೆ ಜಿಲ್ಲೆ ಸೇರಿದಂತೆ ನಾನಾ ಕಡೆಯಿಂದ ಗಣ್ಯಾತಿ ಗಣ್ಯರು, ವಿವಿಧ ಚುನಾಯಿತ ಜನಪ್ರತಿನಿಧಿಗಳು, ಶಾಸಕರು, ಶ್ರೀರಾಮುಲು ಅವರ ಅಭಿಮಾನಿಗಳು ನಿವಾಸಕ್ಕೆ ಭೇಟಿ ನೀಡಿ ತಾಯಿಯ ದರ್ಶನ ಪಡೆದು ಕುಟುಂಬದ ಸದಸ್ಯರಿಗೆ ಸಾಂತ್ವಾನ ಹೇಳಿದರು.
ನೋವೆಲ್ ಕೊರೋನಾ ಹಿನ್ನೆಲೆಯಲ್ಲಿ ಹೆಚ್ಚು ಜನರು ಸೇರಬಹುದು ಎನ್ನುವ ಕಾರಣಕ್ಕೆ ಅಂತ್ಯಕ್ರೀಯೆಯನ್ನು ಸಂಬಂಧಿಕರು, ಆಪ್ತರು ಸೇರಿದಂತೆ ಇತರರ ನೆರವೇರಿಸಿದರು. ಈ ಸಂದರ್ಭದಲ್ಲಿ ಸಚಿವರ ಆಪ್ತ ಸಹಾಯಕರು ಇತರರು ಇದ್ದರು.