Thursday, August 11, 2022

Latest Posts

ಸಚಿವ ಶಿವರಾಮ ಹೆಬ್ಬಾರ್ ಸಮ್ಮುಖದಲ್ಲಿ ಜೆಡಿಎಸ್ ತಾಲೂಕಾಧ್ಯಕ್ಷ ಬಿಜೆಪಿ ಸೇರ್ಪಡೆ

ಕುಮಟಾ: ಜಿಲ್ಲಾ ಉಸ್ತುವಾರಿ ಮಂತ್ರಿ ಶಿವರಾಮ ಹೆಬ್ಬಾರ್ ಸಮ್ಮುಖದಲ್ಲಿ ಸೋಮವಾರ ಜೆಡಿಎಸ್ ಪಕ್ಷ ತಾಲೂಕಾಧ್ಯಕ್ಷ ಮಂಜುನಾಥ ಪಟಗಾರ ಅವರು ಜೆಡಿಎಸ್ ತೊರೆದು, ತಮ್ಮ ಬೆಂಬಲಿಗರೊಂದಿಗೆ ಭಾರತೀಯ ಜನತಾ ಪಕ್ಷವನ್ನು ಸೇರ್ಪಡೆಗೊಂಡರು.
ತಾಲೂಕಿನ ಭಾರತೀಯ ಜನತಾ ಪಕ್ಷದ ಕಾರ್ಯಾಲಯದಲ್ಲಿ ಈ ಸೇರ್ಪಡೆ ಕಾರ್ಯಕ್ರಮ ಜರುಗಿತು.
ಈ ಸಂದರ್ಭದಲ್ಲಿ ಮಾತನಾಡಿದ ಸಚಿವ ಶಿವರಾಮ ಹೆಬ್ಬಾರ್, ದೇಶ ಮತ್ತು ರಾಜ್ಯದಲ್ಲಿ ಬಿಜೆಪಿ ಮಾತ್ರ ಜನಪರ ಪಕ್ಷವಾಗಿದೆ. ಒಂದೇ ವರ್ಷದ ಅವಧಿಯಲ್ಲಿ ಎರಡು ಭೀಕರ ಘಟನೆಗಳಿಂದ ನಾಡು ತತ್ತರಿಸಿದೆ. ಪ್ರವಾಹ ಹಾಗೂ ಕೋವಿಡ್ ಆರ್ಥಿಕ ಹಿನ್ನಡೆಯನ್ನುಂಟು ಮಾಡಿತು. ಪ್ರಧಾನಿ ಮೋದಿಯವರ ಸಮರ್ಥ ಆಡಳಿತ ಹಾಗೂ ಸಮಯೋಚಿತ ನಿರ್ಧಾರದಿಂದ ಕೋವಿಡ್ ವಿರುದ್ಧ ಆತ್ಮವಿಶ್ವಾಸದ ಹೋರಾಟ ಸಾಧ್ಯವಾಗಿದೆ ಎಂದರು.
ಶಾಸಕ ದಿನಕರ ಶೆಟ್ಟಿ , ಬಿಜೆಪಿ ಜಿಲ್ಲಾಧ್ಯಕ್ಷ ವೆಂಕಟೇಶ ನಾಯಕ , ಮಂಡಲಾಧ್ಯಕ್ಷ ಹೇಮಂತಕುಮಾರ ಗಾಂವಕರ, ಮುಖಂಡ ವಿನೋದ ಪ್ರಭು , ಪ್ರಮುಖರಾದ ಡಾ.ಜಿ.ಜಿ.ಹೆಗಡೆ, ನಾಗರಾಜ ಇದ್ದರು .

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss