ಹೊಸ ದಿಗಂತ ಆನ್ ಲೈನ್ ಡೆಸ್ಕ್:
ಸಚಿವ ಸಂಪುಟ ನಾಳೆ ವಿಸ್ತರಣೆ ಅಗಲಿದ್ದು, 7 ರಿಂದ 8 ಜನ ಶಾಸಕರು ಸೇರುವುದು ಪಕ್ಕಾ ಆಗಿದ್ದು, ಪಟ್ಟಿಯನ್ನು ಇಂದು ಸಂಜೆ ಅಥವಾ ನಾಳೆ ಬಿಡುಗಡೆ ಮಾಡುವುದಾಗಿ ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಅವರು, ನಾಳೆ ಮಧ್ಯಾಹ್ನ 3.50 ಕ್ಕೆ ರಾಜಭವನದಲ್ಲಿ ನೂತನ ಸಚಿವರು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ರಾಜಭವನಕ್ಕೆ ನಾಳೆ ಮಧ್ಯಾಹ್ನ 3.30 ಕ್ಕೆ ಬರಲು ಆ ಶಾಸಕರಿಗೆ ಸೂಚನೆ ಕೊಟ್ಟಿದ್ದೇನೆ. ಇಂದು ಸಂಜೆ ಅಥವಾ ನಾಳೆ ಬೆಳಗ್ಗೆ ಪಟ್ಟಿ ಬಿಡುಗಡೆ ಆಗುತ್ತೆ ಹೇಳಿದ್ದಾರೆ.
ಪ್ರಸ್ತುತ ಸಂಪುಟದಲ್ಲಿ 7 ಖಾತೆಗಳು ಮಾತ್ರವೇ ಖಾಲಿ ಇದೆ. ಆದರೆ ಮುಖ್ಯಮಂತ್ರಿ ಯಡಿಯೂರಪ್ಪ ಅವರು ನಾಳೆ ಮಧ್ಯಾಹ್ನ 3:50ಕ್ಕೆ 7-8 ಮಂದಿ ಪ್ರಮಾಣವಚನ ಸ್ವೀಕರಿಸುತ್ತಾರೆ ಎಂದಿದ್ದಾರೆ. ಆ ಮೂಲಕ ಒಬ್ಬ ಹಾಲಿ ಸಚಿವರಿಗೆ ಕೋಕ್ ನೀಡುವುದು ಬಹುತೇಕ ಖಚಿತ ಎಂಬಂತಾಗಿದೆ.