ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Tuesday, June 22, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ಸಚಿವ ಸ್ಥಾನ ಆಕಾಂಕ್ಷಿಗಳಿಗೆ ಗುಡ್ ನ್ಯೂಸ್ ಕೊಟ್ಟ ಸಿಎಂ: ಮೂರು ದಿನಗಳಲ್ಲಿಯೇ ಸಂಪುಟ ವಿಸ್ತರಣೆ ಎಂದ ಬಿಎಸ್ ಯಡಿಯೂರಪ್ಪ

ಹೊಸ ದಿಗಂತ ಆನ್ ಲೈನ್ ಡೆಸ್ಕ್ :

ರಾಜ್ಯದ ಶಿರಾ ಹಾಗೂ ರಾಜರಾಜೇಶ್ವರಿನಗರಕ್ಕೆ ನಡೆದಂತ ಉಪ ಚುನಾವಣೆಯಲ್ಲಿ ಬಿಜೆಪಿಯ ಅಭ್ಯರ್ಥಿಗಳು ಭರ್ಜರಿ ಗೆಲುವನ್ನು ಸಾಧಿಸಿದ್ದಾರೆ. ಇಂತಹ ಸಂದರ್ಭದಲ್ಲಿಯೇ ಸಚಿವ ಸ್ಥಾನದ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್ ನೀಡಿರುವ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ, ಇನ್ನೂ ಎರಡು ಮೂರು ದಿನಗಳಲ್ಲಿಯೇ ಸಂಪುಟ ವಿಸ್ತರಣೆ ಮಾಡುವುದಾಗಿ ತಿಳಿಸಿದ್ದಾರೆ.
ನಗರದಲ್ಲಿ ಉಪ ಚುನಾವಣೆಯ ಗೆಲುವಿನ ಕುರಿತು ಪ್ರತಿಕ್ರಿಯೆ ನೀಡಿದ ಸಿಎಂ ಬಿಎಸ್ ಯಡಿಯೂರಪ್ಪ ಅವರು, ನಾವು ಉಪ ಚುನಾವಣೆಯಲ್ಲಿ ಜನರಿಗೆ ಕೊಟ್ಟಿರುವಂತ ಭರವಸೆಯನ್ನು ಈಡೇರಿಸುತ್ತೇವೆ. 2 ವರ್ಷಗಳಲ್ಲಿ ಕ್ಷೇತ್ರದ ಅಭಿವೃದ್ಧಿ ಕೆಲಸಗಳನ್ನು ಮಾಡಿಯೇ ತೋರಿಸುತ್ತೇವೆ. ಉಪ ಚುನಾವಣೆಯಲ್ಲಿ ಬಿಜೆಪಿಯ ಅಭ್ಯರ್ಥಿಗಳನ್ನು ಗೆಲ್ಲಿಸಿದಂತ ಮತದಾರರಿಗೆ ಧನ್ಯವಾದಗಳನ್ನು ತಿಳಿಸಿದರು.
ಇನ್ನೂ ಮುಂದುವರೆದು ಮಾತನಾಡಿದ ಅವರು, ನಾಳೆ ಅಥವಾ ನಾಡಿದ್ದು ಬಿಜೆಪಿ ವರಿಷ್ಠರನ್ನು ಭೇಟಿ ಮಾಡಲಿದ್ದೇನೆ. ಬಿಜೆಪಿ ಹೈಕಮಾಂಡ್ ಭೇಟಿಯ ಬಳಿಕ, 2-3 ದಿನಗಳಲ್ಲಿ ಸಚಿವ ಸಂಪುಟವನ್ನು ವಿಸ್ತರಣೆ ಮಾಡಲಾಗುತ್ತದೆ ಎಂಬುದಾಗಿ ತಿಳಿಸಿದರು. ಈ ಮೂಲಕ ಸಚಿವ ಸ್ಥಾನ ಆಕಾಂಕ್ಷಿಗಳಿಗೆ ಗುಡ್ ನ್ಯೂಸ್ ನೀಡಿದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss