ಹೊಸ ದಿಗಂತ ಆನ್ ಲೈನ್ ಡೆಸ್ಕ್:
ನಾಳೆ ಸಚಿವ ಸಂಪುಟ ವಿಸ್ತರಣೆ ನಿಚ್ಚಿತ. ಇಲ್ಲಿ ಯಾರಿಗೂ ಯಾವುದೇ ಬೇಧ ಭಾವವಿಲ್ಲದೆ ಗೌರವ ಕೊಡಲಾಗುವುದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ.
ಹಾಸನದಲ್ಲಿ ಮಾತನಾಡಿದ ಅವರು, ನಮ್ಮಲ್ಲಿ ಮೂಲ ಬಿಜೆಪಿಗರು, ವಲಸೆ ಬಿಜೆಪಿಗರು ಎಂಬುವುದು ಇಲ್ಲ. ಸಚಿವ ಸ್ಥಾನ ಯಾರಿಗೆ ಸಿಗಲಿದೆ ಎಂಬುದು ಮುಖ್ಯಮಂತ್ರಿಗಳಿಗೆ ಬಿಟ್ಟ ವಿಚಾರ ಎಂದರು.
ಸಿಎಂ ಬದಲಾವಣೆಯ ಕುರಿತು ಸಿದ್ದರಾಮಯ್ಯ ಹೇಳಿಕೆ ವಿಚಾರವಾಗಿ ಮಾತನಾಡಿದ ಅವರು, ನಮ್ಮ ಪಕ್ಷದ ಮುಖ್ಯಮಂತ್ರಿಯನ್ನು ಬದಲಾವಣೆ ಮಾಡುವುದಕ್ಕೆ ಸಿದ್ದರಾಮಯ್ಯ ಹೇಗೆ ನಿರ್ಧಾರ ಮಾಡುತ್ತಾರೆ? ಅವರೇನು ನಮ್ಮ ಪಾರ್ಟಿಯವರಾ ಎಂದು ಪ್ರಶ್ನೆ ಮಾಡಿದರು.