ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Wednesday, August 4, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ಸತ್ತ ಮುಸ್ಲಿಂ ವ್ಯಕ್ತಿಯ ಶವ ಸಂಸ್ಕಾರಕ್ಕೆ ಬಾರದ ಬಂಧುಗಳು: ಗ್ರಾಮಸ್ಥರಿಂದ ಹಿಂದೂ ಸಂಪ್ರದಾಯದಂತೆ ಅಂತ್ಯಕ್ರಿಯೆ

ಶನಿವಾರಸಂತೆ: ಸತ್ತ ವ್ಯಕ್ತಿಗೆ ಹೆಂಡತಿ, ಮಕ್ಕಳು ಸಂಬಂಧಿಕರು ಇದ್ದರೂ ಅಂತ್ಯಕ್ರಿಯೆಗೆ ಬಾರದ ಅಮಾನವೀಯ ಘಟನೆ ಸೋಮವಾರಪೇಟೆ ತಾಲೂಕಿನ ಶನಿವಾರಸಂತೆ ಸಮೀಪದ ಗೋಪಾಲಪುರ ಗ್ರಾಮದಲ್ಲಿ ನಡೆದಿದೆ.
ಗೋಪಾಲಪುರ ಗ್ರಾಮದ ನಿವಾಸಿ ಯೂಸುಫ್ ಅಲಿಯಾಸ್ ವರ್ಗಿಸ್ (68) ಸತ್ತ ವ್ಯಕ್ತಿ. ಮೂಲತ: ಕ್ರೈಸ್ತ ಧರ್ಮದವರಾದ ವರ್ಗಿಸ್ ಕೆಲವು ವರ್ಷಗಳ ಹಿಂದೆ ಇಸ್ಲಾಂ ಧರ್ಮಕ್ಕೆ ಮತಾಂತರಗೊಂಡಿದ್ದು ಯೂಸುಫ್ ಎಂದು ಹೆಸರು ಬದಲಾಯಿಸಿಕೊಂಡಿದ್ದರು. ಯೂಸುಫ್‍ಗೆ ಹೆಂಡತಿ, ಮೂವರು ಮಕ್ಕಳಿದ್ದು ಕೆಲವು ದಿನಗಳಿಂದ ಅವರುಗಳು ಮಂಗಳೂರಿನಲ್ಲಿ ವಾಸವಾಗಿದ್ದ ಹಿನ್ನೆಲೆಯಲ್ಲಿ ಯೂಸುಫ್ ಒಬ್ಬರೇ ಗೋಪಾಲಪುರದಲ್ಲಿ ವಾಸವಾಗಿದ್ದರು.
ವಯೋ ಸಹಜ ಆನಾರೋಗ್ಯ ಸಮಸ್ಯೆಯಿಂದ ಮಡಿಕೇರಿಯ ಜಿಲ್ಲಾ ಆಸ್ಪತ್ರೆಗೆ ದಾಖಲಾಗಿದ್ದ ಯೂಸುಫ್ ಜು.4 ರಂದು ಮೃತಪಟ್ಟಿದ್ದಾರೆ. ಸತ್ತ ವ್ಯಕ್ತಿಯ ಸಂಬಂಧಿಕರು ಯಾರೂ ಆಸ್ಪತ್ರೆಗೆ ಬಾರದ ಹಿನ್ನೆಲೆಯಲ್ಲಿ ಆಸ್ಪತ್ರೆ ಸಿಬ್ಬಂದಿ ಅನಾಥ ಶವ ಎಂದು ಪರಿಗಣಿಸಿ ಮೃತದೇಹವನ್ನು ಶವಾಗಾರದಲ್ಲಿ ಇಟ್ಟಿದ್ದರು. ಅನಾಥ ಶವದ ಕುರಿತು ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ನೀಡಲಾಗಿತ್ತು.
ಮಾಹಿತಿ ತಿಳಿದ ಗೋಪಾಲಪುರದ ಸ್ಥಳೀಯರು ಮತ್ತು ಕರವೇ ಕಾರ್ಯಕರ್ತರು ಮೃತ ವ್ಯಕ್ತಿಯ ಹೆಂಡತಿ, ಮಕ್ಕಳು ಮತ್ತು ಸಂಬಂಧಿಕರಿಗೆ ಮಾಹಿತಿ ನೀಡಿದರೂ ಯಾರು ಬಾರದ ಹಿನ್ನೆಲೆಯಲ್ಲಿ ಸ್ಥಳೀಯರು ಮತ್ತು ಕರ್ನಾಟಕ ರಕ್ಷಣಾ ವೇದಿಕೆಯ ಕಾರ್ಯಕರ್ತರು ಸೇರಿಕೊಂಡು ಮಡಿಕೇರಿ ಆಸ್ಪತ್ರೆಯ ಶವಾಗಾರದಲ್ಲಿದ್ದ ಮೃತದೇಹವನ್ನು ಗೋಪಾಲಪುರ ಗ್ರಾಮಕ್ಕೆ ತಂದು ಹಿಂದೂ ಸಂಪ್ರದಾಯದಂತೆ ವಿಧಿವಿಧಾನದಂತೆ ಅಂತ್ಯಕ್ರಿಯೆ ನೆರವೇರಿಸುವ ಮೂಲಕ ಮಾನವೀಯತೆ ಮೆರೆದರು. ಕ್ರೈಸ್ತ ಧರ್ಮದಲ್ಲಿ ಜನಿಸಿ ಇಸ್ಲಾಂ ಧರ್ಮಕ್ಕೆ ಮತಾಂತರಗೊಂಡ ವ್ಯಕ್ತಿ ಸತ್ತಾಗ ಸಂಬಂಧಿಕರು ಬಾರದಿದ್ದಾಗ ಹಿಂದೂ ಧರ್ಮದ ಪ್ರಕಾರ ಅಂತ್ಯಸಂಸ್ಕಾರ ಮಾಡಿರುವ ಅಪರೂಪದ ಘಟನೆಗೆ ಇದು ಸಾಕ್ಷಿಯಾಗಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss