Tuesday, June 28, 2022

Latest Posts

ಸದನದಲ್ಲಿ ಗದ್ದಲ: ಚಂದ್ರಬಾಬು ನಾಯ್ಡು ಸಹಿತ 12 ಶಾಸಕರ ಅಮಾನತು

ಹೊಸ ದಿಗಂತ ಆನ್ ಲೈನ್ ಡೆಸ್ಕ್ :

ಆಂಧ್ರಪ್ರದೇಶ ವಿಧಾನಸಭೆ ಚಳಿಗಾಲ ಅಧಿವೇಶನದ ಮೊದಲ ದಿನವೇ ಸದಸನದಲ್ಲಿ ಕೋಲಾಹಲ ಸೃಷ್ಟಿಸಿದ ಕಾರಣಕ್ಕೆ ಪ್ರತಿಪಕ್ಷ ನಾಯಕ ಚಂದ್ರಬಾಬು ನಾಯ್ಡು ಹಾಗೂ 12 ಶಾಸಕರನ್ನು ಅಮಾನತುಗೊಳಿಸಲಾಗಿದೆ.
ಪ್ರತಿಭಟನೆ ಕೈಬಿಟ್ಟು ವಾಪಸ್ ಹೋಗಿ ಕುಳಿತುಕೊಳ್ಳಿ ಎಂದು ಸ್ಪೀಕರ್ ಪದೇಪದೆ ಮನವಿ ಮಾಡಿದರೂ ಒಪ್ಪದ ಚಂದ್ರಬಾಬು ನಾಯ್ಡು ಹಾಗೂ ಇತರೆ 12 ಶಾಸಕರನ್ನು ಅಮಾನತುಗೊಳಿಸಲಾಗಿದೆ.
ಟಿಡಿಪಿ ಸದಸ್ಯೆ ನಿಮ್ಮಲಾ ರಮಾನೈದು ಅವರು ನಿವಾರ್ ಚಂಡಮಾರುತದಿಂದ ಉಂಟಾದ ಹಾನಿ ಮತ್ತು ಪರಿಹಾರ ವಿಷಯ ಪ್ರಸ್ತಾಪಿಸಿದಾಗ ಉತ್ತರಿಸಿದ ಮುಖ್ಯಮಂತ್ರಿ ವೈ.ಎಸ್.ಜಗನ್ ಮೋಹನ್ ರೆಡ್ಡಿ ಅವರು, ನಷ್ಟದ ಕುರಿತು ಡಿಸೆಂಬರ್ 15 ರೊಳಗೆ ವರದಿ ನೀಡುವಂತೆ ಸೂಚಿಸಲಾಗಿದೆ. ವರದಿ ಬಂದ ನಂತರ ಸಬ್ಸಿಡಿ ರೂಪದಲ್ಲಿ ಡಿಸೆಂಬರ್ 31 ರೊಳಗೆ ಪರಿಹಾರವನ್ನು ಪಾವತಿಸಲು ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಸ್ಪಷ್ಟಪಡಿಸಿದರು.
ಈ ವೇಳೆ ಪ್ರತಿಪಕ್ಷದ ನಾಯಕ ಚಂದ್ರಬಾಬು ನಾಯ್ಡು ಅವರಿಗೆ ಮಾತನಾಡಲು ಅವಕಾಶ ನೀಡುವಂತೆ ಒತ್ತಾಯಿಸಲಾಯಿತು. ಆದರೆ ಅವರ ಪಕ್ಷದ ಸದಸ್ಯ ರಮಾನೈದು ಮಾತನಾಡುತ್ತಿರುವುದರಿಂದ ಇದನ್ನು ನಿರಾಕರಿಸಲಾಯಿತು. ಅಲ್ಲದೆ ಇದರಿಂದ ಕೋಪಗೊಂಡ ಚಂದ್ರಬಾಬು ನಾಯ್ಡು ಅವರು ಸ್ಪೀಕರ್ ಕುರ್ಚಿಯ ಮುಂದೆ ನೆಲದ ಮೇಲೆ ಕುಳಿತು ಪ್ರತಿಭಟನೆ ನಡೆಸಿದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss