ಬೆಂಗಳೂರು: ಮಕ್ಕಳ ಆರೋಗ್ಯ ಮತ್ತು ಭವಿಷ್ಯದ ಹಿತದೃಷ್ಠಿಯಿಂದ ಶಾಲೆಗಳನ್ನು ಪ್ರಾರಂಭಿಸುವ ಮುನ್ನಾ ಎಲ್ಲ ಪಕ್ಷಗಳ ಮುಖಂಡರು, ತಜ್ಞರ, ಹಿರಿಯ ಅಧಿಕಾರಿಗಳ ಸಭಯನ್ನು ಕರೆದು ತೀರ್ಮಾನ ಕೈಗೊಳ್ಳುವುದಾಗಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಸ್ಪಷ್ಟ ಪಡಿಸಿದ್ದಾರೆ.
ಸದ್ಯಕ್ಕೆ ಶಾಲೆಗಳನ್ನು ತೆರೆಯುವ ಕುರಿತು ಯಾವುದೇ ಆಲೋಚನೆ ಸರ್ಕಾರದ ಮುಂದಿಲ್ಲ, ಸಾಧಕ-ಬಾಧಕಗಳನ್ನು ನೋಡಿಕೊಂಡೇ ನಿರ್ಧಾರ ಕೈಗೊಳ್ಳಲಾಗುತ್ತದೆ ಹೇಳಿದರು.
ಈ ಕುರಿತಂತೆ ಪ್ರಕಟಣೆ ಹೊರಡಿಸಿರುವ ಅವರು, ಮಾದ್ಯಮಗಳಲ್ಲಿ ಶಾಲೆ ಆರಂಭಿಸುವ ಬಗ್ಗೆ ಪರ ವಿರೋಧದ ಚರ್ಚೆ ಗಮನಿಸಿರುತ್ತೇನೆ. ಅಲ್ಲದೇ ಈ ಕುರಿತು ವಿವಿಧ ರಾಜಕೀಯ ಪಕ್ಷಗಳ ಮುಖಂಡರೂ ಸಹಿತ ತಮ್ಮ ನಿಲುವುಗಳನ್ನು ವ್ಯಕ್ತ ಪಡಿಸಿರುತ್ತಾರೆ.
ಶಾಲೆಗಳನ್ನು ತೆರೆಯುವ ಬಗ್ಗೆ ಉಂಟಾಗಿರುವ ಉಹಾ ಪೋಹಗಳಿಗೆ ಮತ್ತು ವದಂತಿಗಳಿಗೆ ಕಿವಿಗೊಡಬಾರದು ಎಂದು ಪೋಷಕರಿಗೆ ಮನವಿ ಮಾಡುತ್ತೇನೆ. ಈ ಬಗ್ಗೆ ಜಾಗೃತಿ ಮೂಡಿಸಲು ಮಾಧ್ಯಮಗಳಲ್ಲಿ ಕೋರುತ್ತೇನೆ ಎಂದು ಸಿಎಂ ಪತ್ರಿಕಾ ಪ್ರಕಟಣೆ ಮೂಲಕ ತಿಳಿಸಿದ್ದಾರೆ.