ಹೊಸದಿಗಂತ ಆನ್ಲೈನ್ ಡೆಸ್ಕ್:
ರಾಜ್ಯ ವಿಧಾನಪರಿಷತ್ನ ಸಭಾಪತಿ ಸ್ಥಾನವನ್ನು ನಮಗೆ ಕೊಡಬೇಕು. ನಾವೇನು ಸನ್ಯಾಸಿಗಳಲ್ಲ ಎಂದು ಮಾಜಿ ಸಚಿವ ಬಸವರಾಜ ಹೊರಟ್ಟಿ ಹೇಳಿದ್ದಾರೆ.
ಈ ಬಗ್ಗೆ ಮಾತನಾಡಿ, ನಾನು ಸಭಾಪತಿಯಾಗಬೇಕು ಎಂಬುದರ ಬಗ್ಗೆ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷರಾದ ಮಾಜಿ ಪ್ರಧಾನಿ ಎಚ್.ಡಿ.ದೇವೆಗೌಡರು ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರಿಗೆ ಸ್ಪಷ್ಟತೆಯಿದೆ.
ವಿಧಾನಪರಿಷತ್ನ ಸಭಾಪತಿ ವಿರುದ್ಧದ ಬಿಜೆಪಿಯ ಅವಿಶ್ವಾಸ ನಿರ್ಣಯ ಮಂಡನೆಗೆ ನಮ್ಮ ಬೆಂಬಲವೂ ಇದೆ. ನಾವು ಸಹಿ ಹಾಕಿ ಇಟ್ಟುಕೊಂಡಿದ್ದೇವೆ. ನಮ್ಮ ಪಕ್ಷದ ವರಿಷ್ಠರು ಸೂಚಿಸಿದ ತಕ್ಷಣವೇ ವಿಧಾನಪರಿಷತ್ ಕಾರ್ಯದರ್ಶಿಗೆ ಅದನ್ನು ತಲುಪಿಸುತ್ತೇವೆ ಎಂದರು.