ಹೊಸದಿಗಂತ ಆನ್ ಲೈನ್ ಡೆಸ್ಕ್:
ಕೇಂದ್ರ ಸರ್ಕಾರದ ನೂತನ ಕೃಷಿ ಕಾನೂನುಗಳನ್ನು ವಿರೋಧಿಸಿ ರೈತರು ನಡೆಸುತ್ತಿರುವ ಪ್ರತಿಭಟನೆ 34 ದಿನಗಳು ತಲುಪಿದ್ದು, ಈ ಮಧ್ಯೆ ರೈತರು ಮತ್ತು ಕೇಂದ್ರ ಸರ್ಕಾರದೊಂದಿಗೆ 6ನೇ ಸುತ್ತಿನ ಮಾತುಕತೆ ನಡೆಸಿದರು.
ಈ ಮಾತುಕತೆಯಲ್ಲಿ ರೈತರ 4 ಬೇಡಿಕೆಗಳಲ್ಲಿ ಎರಡು ಬೇಡಿಕೆಗಳನ್ನು ಮಾತ್ರ ಈಡೇರಿಸಲು ಕೇಂದ್ರ ಸರ್ಕಾರ ಒಪ್ಪಿಗೆ ಸೂಚಿಸಿದ್ದು, ಕೃಷಿ ಕಾಯ್ದೆ ಮತ್ತು ಎಂಎಸ್ ಪಿ ಬಗ್ಗೆ ಜನವರಿ 4ರಂದು ಚರ್ಚಿಸುವುದಾಗಿ ತಿಳಿಸಿದೆ.
ಬುಧವಾರ ಪ್ರತಿಭಟನಾ ನಿರತ 40 ರೈತ ಸಂಘಟನೆಗಳು ಕೃಷಿ ಕಾಯ್ದೆಯನ್ನು ವಾಪಸ್ ಪಡೆಯಬೇಕು ಅನ್ನೋ ಒತ್ತಾಯದ ಜೊತೆಗೆ ಇದುವರೆಗೆ ಸಾವನ್ನಪ್ಪಿರುವ ರೈತರ ಕುಟುಂಬಕ್ಕೆ ಪರಿಹಾರ ನೀಡಬೇಕು ಅಂತಾ ಆಗ್ರಹಿಸಿದ್ದಾರೆ.
ಈ ಮೂಲಕ ವಿಜ್ಞಾನ ಭವನದಲ್ಲಿ ನಡೆದ ಸಭೆಯಲ್ಲಿ ರೈತರ ಬೇಡಿಕೆಗಳಿಗೆ ಕೇಂದ್ರ ಒಪ್ಪದ ಹಿನ್ನೆಲೆಯಲ್ಲಿ ಮತ್ತೆ ಸಭೆ ವಿಫಲಗೊಂಡಿದೆ. ಈ ಕಾರಣದಿಂದಾಗಿ ಮತ್ತೊಮ್ಮೆ ಸಂಧಾನ ಸಭೆ ನಡೆಸಲು ತೀರ್ಮಾನ ಕೈಗೊಳ್ಳಲಾಗಿದೆ.